More

  ಪರಿಶ್ರಮದಿಂದ ಗುರಿ ತಲುಪಲು ಸಾಧ್ಯ

  ತಾವರಗೇರಾ: ವಿದ್ಯಾರ್ಥಿ ದೆಸೆಯಲ್ಲೇ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಪ್ರಾಚಾರ್ಯ ನಾಗರಾಜ ಸಂಗನಾಳ ಹೇಳಿದರು.

  ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಥಳೀಯ ಉದ್ಯಮಿ ಅಮರೇಶ ಗಲಗಲಿ ಅವರು ತಂದೆಯ ಸ್ಮರಣಾರ್ಥ ಪ್ರತಿವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಸಹಿತ ಸನ್ಮಾನ ಮಾಡುತ್ತಿರುವುದು ಶ್ಲಾಘನೀಯ ಎಂದರು.

  ಪ್ರಮುಖರಾದ ಗವಿಸಿದ್ದಪ್ಪ ನಾಗಲೀಕರ, ಎನ್.ಶಾಮೀದ, ಸಂಗೀತ ಶಿಕ್ಷಕ ರವಿಚಂದ್ರ, ಅಮರೇಶ, ಶರಣಬಸವ ನವಲಹಳ್ಳಿ, ಶಿವಲಿಂಗಮ್ಮ, ಲಕ್ಷ್ಮಣ ಇದ್ದರು. ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿ, ನಿರೂಪಿಸಿದರು. ವಿದ್ಯಾರ್ಥಿನಿ ವಿದ್ಯಾ ವಂದಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts