More

    ಹಳ್ಳಿಗಳ ಸ್ವಚ್ಛತೆಗೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ

    ತಾವರಗೇರಾ: ನಗರಗಳಂತೆಯೇ ಹಳ್ಳಿಗಳಲ್ಲಿ ಶುಚಿತ್ವ ಕಾಪಾಡಲು ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಲಾಗುತ್ತಿದೆ ಎಂದು ತಾಪಂ ಇಒ ಜಯರಾಮ್ ಚವ್ಹಾಣ್ ಹೇಳಿದರು.

    ಸಮೀಪದ ಜುಮಲಾಪುರ ಗ್ರಾಪಂ ವ್ಯಾಪ್ತಿಯ ಸಾಸ್ವಿಹಾಳದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಘನ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸಾಸ್ವಿಹಾಳ ಗ್ರಾಮದ ಒಂದು ಎಕರೆ ಸರ್ಕಾರಿ ಜಮೀನಿನಲ್ಲಿ ಘಟಕ ನಿರ್ಮಾಣಕ್ಕೆ 20 ಲಕ್ಷ ರೂ. ಬಿಡುಗಡೆಯಾಗಿದೆ. ಕೋಣೆ, ಕಾಂಪೌಂಡ್ ನಿರ್ಮಾಣ, ಗೇಟ್ ಅಳವಡಿಕೆ, ಕಸ ಸಾಗಣೆ ವಾಹನಗಳು ಹಾಗೂ ಇತರ ಉಪಕರಣಗಳ ಖರೀದಿ ಮಾಡಲಾಗುವದು ಜುಮಲಾಪುರ ಹಾಗೂ ಮುದೇನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಹಸಿ ಕಸದಿಂದ ಗೊಬ್ಬರ ತಯಾರಿಸುವ ಘಟಕದ ನಿರ್ಮಾಣಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಗ್ರಾಮಗಳನ್ನು ಸ್ವಚ್ಛವಾಗಿಡಲು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

    ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ದಂಡಿನ, ತಾಪಂ ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ನರೇಗಾ ತಾಂತ್ರಿಕ ಸಂಯೋಜಕ ತನ್ವೀರ್, ಪಿಡಿಒ ನಾಗೇಶ ಅಳಿಗನೂರ, ಗ್ರಾಪಂ ಸದಸ್ಯರು, ಸಿಬ್ಬಂದಿ ಹಾಗೂ ಪ್ರಮುಖರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts