ತೆರಿಗೆ ಸಂಗ್ರಹ; ಅಧಿಕಾರಿಗಳ ಜತೆ ಸಿಎಂ ಗಹನ‌ ಚರ್ಚೆ

imresizer-1694675091485
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ ಹಾಜರಿದ್ದರು.

ಉಳಿದಂತೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತೆರಿಗೆ ಸಂಗ್ರಹ ಪ್ರಮಾಣ, ಗುರಿ ಸಾಧನೆ, ಸವಾಲುಗಳು, ಆಗಬೇಕಾದ ಸುಧಾರಣೆ ಕ್ರಮಗಳ ಬಗ್ಗೆ ಸಭೆಯಲ್ಲಿ‌ ಚರ್ಚೆ ನಡೆಯಿತು.

ಗ್ಯಾರಂಟಿ ಅನುಷ್ಠಾನದ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹಕ್ಕೆ‌ ಒತ್ತು ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿರುವ ಸರ್ಕಾರ, ಅಧಿಕಾರಿಗಳೊಂದಿಗೆ ಅಮಾಲೋಚನೆ ನಡೆಸಿ ಸಲಹೆ ಸೂಚನೆ ನೀಡಿದೆ.

ಬೆಳಗ್ಗೆ ವಾಣಿಜ್ಯ ತೆರಿಗೆ ಇಲಾಖೆ, ಬಳಿಕ ಅಬಕಾರಿ ಇಲಾಖೆ, ಸಂಜೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸಾರಿಗೆ ಇಲಾಖೆ, ಗಣಿ ಮತ್ತು ಭು ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸುವ ಸಿಎಂ ಕೊನೆಯಲ್ಲಿ ಆರ್ಥಿಕ ಇಲಾಖೆಯ ಸಭೆ ನಡೆಸುವರು.

ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ ತೆರಿಗೆ ಸೋರಿಕೆ ತಡೆಗಟ್ಟಲು ನಿರಂತರ ದಾಳಿ ನಡೆಸುತ್ತಿದ್ದರೆ, ಮುದ್ರಾಂಕ ಇಲಾಖೆ ಆಸ್ತಿ ಮಾರ್ಗಸೂಚಿ ದರವನ್ನು ಪರಿಷ್ಕರಿಸುವ ಪ್ರಕ್ರಿಯೆಯ ಕೊನೆ ಹಂತದಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net