ವಿಧಾನ ಪರಿಷತ್​ ಸದಸ್ಯ ಆರ್ ಶಂಕರ್ ಮನೆ ಮೇಲೆ ತೆರಿಗೆ ಅಧಿಕಾರಿಗಳ ದಾಳಿ!

R Shankar house
Published on

ಹಾವೇರಿ: ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಬೀರಲಿಂಗೇಶ್ವರ ನಗರದ ಮನೆಯ ಮೇಲೆ ದಾಳಿ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದಾಳಿ ಮಾಡಿದ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಈ ಸಂದರ್ಭ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರೋ ಸೀರೆ ಬಾಕ್ಸ್. ತಟ್ಟೆ ಲೋಟಾ ಹಾಗೂ ಎಲ್.ಕೆ.ಜಿ ಪದವಿ ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ ಪತ್ತೆಯಾಗಿದ್ದು ಹಾವೇರಿ ಉಪವಿಭಾಗಧಿಕಾರಿ ದಾಖಲೆ ಪತ್ರ, ಬಿಲ್ ಮತ್ತು ಸ್ಟಾಕ್ ಚೆಕ್ ತಪಾಸಣೆ ಮಾಡಿದ್ದಾರೆ.

ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್​ ಶಂಕರ್ 'ಯಾರೋದ್ದೊ ಕುಮ್ಮಕ್ಕಿನಿಂದ ಈ ದಾಳಿ ನಡೆದಿದೆ. ನಾನು ದುಡಿದ ಹಣ. ಸಮಾಜಸೇವೆ ಬಳಕೆ ಮಾಡುತ್ತಿದ್ದೇನೆ' ಎಂದಿದ್ದಾರೆ. ಈ ದಾಳಿ ನಿನ್ನೆ ರಾತ್ರಿ ೧೧ ಗಂಟೆಗೆ ನಡೆದಿದ್ದು ‌ಪರಿಶೀಲನೆ ನಡೆಸಿದ ಅಧಿಕಾರಿಗಳು ರಾತ್ರಿಯೇ ವಾಪಸ್ಸಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net