More

    ಶಿರಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಟಿ.ಬಿ.ಜಯಚಂದ್ರ

    ಶಿರಾ: ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶುಕ್ರವಾರ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಉಪಕದನಕ್ಕೆ ಅಧಿಕೃತ ಚಾಲನೆ ದೊರೆತಿದೆ.

    ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಮಧ್ಯಾಹ್ನ 12.30ಕ್ಕೆ ತಹಸೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ನಂದಿನಿದೇವಿ ಅವರಿಗೆ ಸಲ್ಲಿಸಿದರು. ನಗರಸಭಾ ಮಾಜಿ ಸದಸ್ಯ ಲೋಕೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಸಾಥ್ ನೀಡಿದರು.

    ಶುಭ ಘಳಿಗೆಯಲ್ಲಿ ನಾಮಪತ್ರ: ಶುಕ್ರವಾರ ಶುಭ ಘಳಿಗೆ ನೋಡಿಕೊಂಡು ಟಿಬಿಜೆ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ 10.30ರಿಂದ 12ರವರೆಗೆ ರಾಹುಕಾಲ ಮುಗಿದ ಬಳಿಕ 12.27ಕ್ಕೆ 3 ಮಂದಿ ಜತೆಗೆ ಸದ್ದುಗದ್ದಲವಿಲ್ಲದೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಬಿ-ಫಾರ್ಮ್ ಸಲ್ಲಿಸಿಲ್ಲ.

    15ಕ್ಕೆ ಮತ್ತೊಂದು ನಾಮಪತ್ರ: ರಾಜಯೋಗ ಇದ್ದ ಕಾರಣ ನಾಮಪತ್ರ ಸಲ್ಲಿಸಿರುವ ಜಯಚಂದ್ರ ಅ.15ಕ್ಕೆ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೇರಿ ಪಕ್ಷದ ಮುಖಂಡರ ಜತೆಗೆ ಮೆರವಣಿಗೆಯಲ್ಲಿ ತೆರಳಿ ಶಕ್ತಿ ಪ್ರದರ್ಶನದೊಂದಿಗೆ ಸಲ್ಲಿಸುವರು.
    ನೆಮ್ಮದಿ ವಾತಾವರಣ ಇದೆ!: ಸುದ್ದಿಗಾರರೊಂದಿಗೆ ಮಾತನಾಡಿದ ಜಯಚಂದ್ರ, ಶಿರಾ ಬರಗಾಲದ ತಾಲೂಕು ಅಂತ ಹೇಳುವುದರ ಜತೆಗೆ ಅಭಿವೃದ್ಧಿ ವಿಚಾರದಲ್ಲಿ ಅತ್ಯಂತ ವೇಗವಾಗಿ ಮುಂದುವರಿಯುತ್ತಿರುವ ತಾಲೂಕಾಗಿದೆ. ಕಳೆದ ಬಾರಿಗಿಂತ ಈ ಬಾರಿ ನೆಮ್ಮದಿಯ ವಾತಾವರಣ ಕ್ಷೇತ್ರದಲ್ಲಿದ್ದು, ಮತದಾರರ ಜತೆ ಚರ್ಚಿಸಿದಾಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಜನತೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಿರಿಕಿರಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್, ಲೇಪಾಕ್ಷ ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದು ಅಖಾಡಕ್ಕೆ ಇಳಿದಿದ್ದಾರೆ. ಇದರಿಂದ ಅಧಿಕೃತ ಅಭ್ಯರ್ಥಿ ಚಿದಾನಂದಗೌಡ ಹಾಗೂ ಪಕ್ಷದ ಮುಖಂಡರಿಗೆ ಕಿರಿಕಿರಿಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts