ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ಶನಿವಾರ 1.36 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ 1.30 ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಯಿತು.
ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಹಂಪಿಯಲ್ಲಿ ಪೊಲೀಸ್ ಬಂದೋಬಸ್ತ್ ಕೂಡ ಹೆಚ್ಚಿಸಲಾಗಿದೆ. ನದಿ ತೀರದಲ್ಲಿ ಪ್ರವಾಸಿಗರು ಕೂಡ ಸುಳಿಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಹಂಪಿಯ ನದಿಯಲ್ಲಿರುವ ಪುರಂದರದಾಸರ ಮಂಟಪ, ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಸ್ನಾನಘಟ್ಟ, ವಿಷ್ಣು ಮಂಟಪ, ತುಂಗಾರತಿ ಸ್ಥಳ, ಕಾಲು ಸೇತುವೆ, ಜನಿವಾರ ಮಂಟಪಗಳು ಸೇರಿದಂತೆ ಸಂಪೂರ್ಣ ಮುಳುಗಡೆಯಾಗಿದೆ. ನದಿ ತೀರಕ್ಕೆ ತೆರಳದಂತೆ ಬ್ಯಾರಿಕೇಡ್‌ಗಳನ್ನು ಕೂಡ ಅಳವಡಿಕೆ ಮಾಡಿ ಎಚ್ಚರಿಸಲಾಗುತ್ತಿದೆ. ಹಂಪಿಯ ಕೋದಂಡರಾಮಸ್ವಾಮಿ ದೇವಾಲಯದ ಆವರಣ ಜಲಾವೃತವಾಗಿದೆ.