More

    ರೈತ ವಿರೋಧಿ ಬಿಜೆಪಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ: ರೈತ ಮುಖಂಡ ಬಡಗಲಪುರ ನಾಗೇಂದ್ರ

    ಮೈಸೂರು: ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವ ಬಿಜೆಪಿಯನ್ನು ಶಿರಾ ಮತ್ತು ಆರ್.ಆರ್. ನಗರ ಉಪ ಚುನಾ ವಣೆಯಲ್ಲಿ ಜನರು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ರಾಜ್ಯ ರೈತ ಸಂಘ ಮಾಡುತ್ತಿದೆ ಎಂದು ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

    ಶಿರಾದಲ್ಲಿ ಅ.28 ರಂದು ಸಭೆ ನಡೆಸಿ ಜನರಿಗೆ ಕರಪತ್ರಗಳನ್ನು ಹಂಚಿಕೆ ಮಾಡಲಾಗಿದೆ. ಅದೇ ರೀತಿ ಅ.30 ರಂದು ಆರ್.ಆರ್. ನಗರದಲ್ಲಿ ಕರಪತ್ರ ಹಂಚಿಕೆ ಮಾಡಲಾಗಿದೆ. ಆರ್.ಆರ್. ನಗರದಲ್ಲಿ ಮಂಡ್ಯ ಭಾಗದಿಂದ ತೆರಳಿ ನೆಲೆಸಿರುವ 40 ಸಾವಿರ ಜನರು ಇದ್ದಾರೆ. ಅವರೆಲ್ಲರನ್ನು ಸಂಪರ್ಕಿಸಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಅವರಿಗೆ ತಿಳಿಸುವ ಪ್ರಯತ್ನ ಮಾಡಲಾಗುವುದು. ಕನಿಷ್ಠ 5 ಸಾವಿರ ಮತಗಳನ್ನಾದರೂ ಬದಲಾಯಿಸುವ ಶಕ್ತಿ ನಮ್ಮಲ್ಲಿ ಇದೆ. ಇದು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ಮತ್ತು ಕಾರ್ಮಿಕರ ಹಿತಕ್ಕೆ ವಿರುದ್ಧವಾಗಿ ರೂಪಿಸಿರುವ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನ.26, 27 ರಂದು ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೆಹಲಿಗೆ ದೇಶದ ವಿವಿಧ ಭಾಗಗಳಿಂದ 10 ಲಕ್ಷ ರೈತರು ಬಂದು ಸೇರುವ ನಿರೀಕ್ಷೆ ಹೊಂದಲಾಗಿದೆ. ಅದೇ ರೀತಿ ನ.5 ರಂದು ಕಾಯ್ದೆ ವಿರೋಧಿಸಿ ದೇಶಾದ್ಯಂತ ಹೆದ್ದಾರಿ ತಡೆ ಚಳವಳಿ ನಡೆಸಲಾಗುವುದು ಎಂದು ಹೇಳಿದರು.

    ಎಪಿಎಂಸಿ, ಭೂ ಸುಧಾರಣೆ ಮತ್ತು ಔದ್ಯೋಗಿಕ ತಿದ್ದುಪಡಿ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೆ ತರಲಾಗಿತ್ತು. ಈ ಸುಗ್ರಿವಾಜ್ಞೆಯ ಅವಧಿ ನ.3ಕ್ಕೆ ಮುಕ್ತಾಯಗೊಳ್ಳಲಿದೆ. ರಾಜ್ಯ ಸರ್ಕಾರ ಮತ್ತೊಮ್ಮೆ ಸುಗ್ರಿವಾಜ್ಞೆ ಹೊರಡಿಸುವ ಸಾಹಸಕ್ಕೆ ಮುಂದಾಗ ಬಾರದು. ಮತ್ತೆ ಸುಗ್ರಿವಾಜ್ಞೆ ಹೊರಡಿಸಿದರೆ ತೀವ್ರ ತರದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts