More

    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ, ಎಸ್.ಆರ್. ಹಿರೇಮಠ

    ಬೆಳಗಾವಿ: ಪ್ರಸಕ್ತ ಲೋಕಸಭೆ ಚುನಾವಣೆ ಐತಿಹಾಸಿಕ ಮತ್ತು ಮಹತ್ವದ ಚುನಾವಣೆ. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಪ್ರಹಾರ ನಡೆಸಿದ ಬೇರೆ ಸರ್ಕಾರ ಇಲ್ಲ. ಈ ಸರ್ಕಾರ ಕಿತ್ತೊಗೆಯಬೇಕಿದೆ ಎಂದು ಸಾಮಾಜಿಕ ಹೋರಾಟಗಾರ, ಸಿಟಿಜನ್ಸ್ ಫಾರ್ ಡೆಮೆಕ್ರಸಿ ಅಧ್ಯಕ್ಷ ಎಸ್.ಆರ್. ಹಿರೇಮಠ ಕರೆ ನೀಡಿದರು.

     ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದೇಶ, ಪ್ರಜಾಪ್ರಭುತ್ವ, ಸಂವಿಧಾನ ಗಂಡಾತರ ಇರುವಾಗ ನಾವು ನಮ್ಮ ಕರ್ತವ್ಯ ನಿರ್ವಹಿಸದಿದ್ದಾಗ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ. ಜನರು ತುರ್ತು ಪರಿಸ್ಥಿತಿ ವೇಳೆ ಯಾವ ರೀತಿ ಇಂದಿರಾ ಸರ್ಕಾರ ಕೆಡವಿದರೋ ಅದೇ ರೀತಿ ಈ ಭಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಾತ್ರಿಯಾಗಿದೆ. ದೇಶದ ಜನರಿಗೆ ಸುಳ್ಳು ಹೇಳಿ ಸಂವಿಧಾನ ತಿದ್ದುಪಡಿ ಮಾಡುವ ಹೇಳಿಕೆ ನೀಡುವ ಬಿಜೆಪಿಯವರಿಗೆ ಈ ಬಾರಿ ಜನರು ತಕ್ಕ ಪಾಠ ಕಲಿಸಬೇಕಿದೆ. ತುರ್ತು ಪರಿಸ್ಥಿತಿಯ ವಿರುದ್ಧ ನಾವು ಹೋರಾಟ ಮಾಡಿದ್ದೇವೆ. ನಾವು ಯಾವುದೇ ಪಕ್ಷದ ಪರವಾಗಿಲ್ಲ. ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಧಕ್ಕೆ ಬಂದಾಗ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.

     ಜಾಗತಿಕ ಮಟ್ಟದಲ್ಲಿ ನರೇಂದ್ರ ಮೋದಿ ಆಳ್ವಿಕೆಯ ವಿರುದ್ಧ ಜನತಾ ಆರೋಪ ಪಟ್ಟಿ ಬಿಡುಗಡೆಯಾಗಿದೆ. ಸಿಟಿಜನ್ಸ್ ಫಾರ ಡೆಮೊಕ್ರಸಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಮೂಲಕ 10 ವರ್ಷಗಳಲ್ಲಿ ಮೋದಿ ನೇತೃತ್ವದ ಎನ್‌ಡಿಎ ಆಳ್ವಿಕೆಯ ವಿರುದ್ಧ ಸುಮಾರು 29 ಪುಟಗಳ ಜನತಾ ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದರು. ಈ ಆಡಳಿತದ ತನಿಖೆಗಳನ್ನು ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕು. ಸೂಕ್ತ ತನಿಖೆ ನಡೆಸಿ ಕ್ರಮಗಳಾಗಬೇಕು ಎಂದು ಒತ್ತಾಯಿಸಿದರು.

     ಡಿ.ಎಸ್.ಚೌಗುಲಾ, ಉಗ್ರನರಸಿಂಹ ಗೌಡ, ಅಭಿರುಚಿ ಗಣೇಶ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts