More

    ಮಕ್ಕಳಿಗೆ ಮನೆಯಲ್ಲಿಯೇ ಸಂಸ್ಕಾರ ಕಲಿಸಿ

    ಹನಗೋಡು: ಪೋಷಕರು ಮಕ್ಕಳಿಗೆ ಮನೆಯಲ್ಲಿಯೇ ಉತ್ತಮ ಸಂಸ್ಕಾರ ಕಲಿಸಬೇಕೆಂದು ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಹಂದನಹಳ್ಳಿ ಸೋಮಶೇಖರ್ ತಿಳಿಸಿದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸ್ಥಳೀಯ ಸ್ವಸಹಾಯ ಸಂಘಗಳ ವತಿಯಿಂದ ಬುಧವಾರ ಗ್ರಾಮದಲ್ಲಿ ಆಯೋಜಿಸಿದ್ದ ಸಾಧನ ಸಮಾವೇಶದಲ್ಲಿ ಸ್ವಸಹಾಯ ಸಂಘಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.

    ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಉಳಿಸಿಕೊಂಡು ಮುನ್ನಡೆಯುವುದು ಅಗತ್ಯವಾಗಿದ್ದು, ಆಹಾರ ಪದ್ಧತಿಯನ್ನೂ ಬದಲಾಯಿಸಬಾರದು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆಗೆ ಬಂದು 10 ವರ್ಷವಾಗಿದೆ. ದಶಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಏನೇನು ಸಾಧನೆ ಮಾಡಿದ್ದೀರಿ ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಸಂಸ್ಥೆ ಜಿಲ್ಲಾ ಯೋಜನಧಿಕಾರಿ ಮುರುಳೀಧರ್ ಮಾತನಾಡಿ, ಧರ್ಮಶಾಸ್ತ್ರ ಹೇಳುವಂತೆ ಮಾನವ ಜನ್ಮ ಶ್ರೇಷ್ಠವಾದದ್ದು. ಪ್ರತಿಯೊಬ್ಬರೂ ಒಳ್ಳೆಯ ಕೆಲಸ ಮಾಡಬೇಕು. ಡಾ.ವೀರೇಂದ್ರ ಹೆಗ್ಗಡೆ ಅವರು ಹಲವಾರು ಸಮಾಜಮುಖಿ ಕಾರ್ಯಕ್ರಮ ಮಾಡಿದ್ದು, ಅವು ಜನಮಾನಸದಲ್ಲಿ ಉಳಿಯಬೇಕಾದರೆ ಸ್ತ್ರೀಶಕ್ತಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.

    ವೇದಿಕೆ ಸದಸ್ಯ ದಾ.ರಾ.ಮಹೇಶ್, ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಎಚ್.ಡಿ.ರವಿ, ತಾಪಂ ಮಾಜಿ ಸದಸ್ಯ ರೂಪಾ ನಂದೀಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷ್ಮೀ, ಯೋಜನಾಧಿಕಾರಿ ನಾರಾಯಣಶೆಟ್ಟಿ, ಮೇಲ್ವಿಚಾರಕಿ ಸುನಂದಾ, ಸೇವಾ ಪ್ರತಿನಿಧಿಗಳಾದ ರವಿ, ಭಾರತಿ, ಆನಂದ್, ರಾಧಾ, ಹರ್ಷಿತಾ, ಗಾಯತ್ರಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts