More

    ಶಿಕ್ಷಣ ಜತೆ ಸಂಸ್ಕಾರ ಕಲಿಸಿ

    ಬೀಳಗಿ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಲು ಶಿಕ್ಷಕರು ಶ್ರಮಿಸಬೇಕೆಂದು ಅನಗವಾಡಿ ಶ್ರೀ ಬನಶಂಕರಿ ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಖೋತ ಹೇಳಿದರು.

    ತಾಲೂಕಿನ ಅನಗವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬಿ.ಎನ್. ಖೋತ್ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಜಯ-ವಿಕ್ರಮ ಉತ್ಸವ 2024 ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

    ಮಕ್ಕಳಿಗೆ ಕಲಿಕೆಗೆ ಪೂರಕವಾದ ಎಲ್ಲ ವ್ಯವಸ್ಥೆಗಳುಳ್ಳ ಶಿಕ್ಷಣ ಸಂಸ್ಥೆ ಇದಾಗಿದ್ದು, ಇಲ್ಲಿನ ಮಕ್ಕಳು ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಜಿಲ್ಲಾ, ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಸಂಸ್ಥೆಗೆ ಗೌರವ ತಂದಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಜತೆಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮದಲ್ಲಿ ತೊಡಗಲು ಪ್ರೋತ್ಸಾಹಿಸಬೇಕು ಎಂದರಲ್ಲದೆ, ಪಾಲಕರು ಮಕ್ಕಳ ಚಲನ-ವಲನಗಳ ಮೇಲೆ ನಿಗಾವಹಿಸಬೇಕು ಎಂದರು.

    ಬಿಇಒ ಆರ್.ಎಸ್. ಆದಾಪುರ, ಸಂಸ್ಥೆ ಉಪಾಧ್ಯಕ್ಷ ನಾಗಪ್ಪ ಖೋತ, ಕುಂದರಗಿಯ ಶ್ರೀ ರಾಮಲಿಂಗೇಶ್ವರ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಈರಣ್ಣ ಗೂಡಿ, ಸಂಸ್ಥೆ ನಿರ್ದೇಶಕಿ ಶೋಭಾ ಖೋತ, ವಿಜಯ ಖೋತ, ವಿಕ್ರಮ ಖೋತ, ಕಾಲೇಜು ಪ್ರಾಂಶುಪಾಲ ಸುರೇಶ ಹವಾಲ್ದಾರ್, ದೈಹಿಕ ಶಿಕ್ಷಕ ಎಚ್.ಎಂ. ಹೂಗಾರ, ಮಹಾಂತೇಶ ಕಡಪಟ್ಟಿ ಇತರರಿದ್ದರು. ನಂತರ ಶಾಲೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳು ನಡೆದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts