18 C
Bangalore
Friday, December 6, 2019

ಶಾಲೆಗಳಲ್ಲಿ ತುಳು ಲಿಪಿ ಕಲಿಸಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯವಾಣಿ ಸುದ್ದಿಜಾಲ ಮಂಗಳೂರು
ತುಳು ಭಾಷೆಗೆ ತನ್ನದೇ ಆದ ಲಿಪಿ ಇದೆ. ತುಳು ವಿದ್ವಾಂಸರು ತುಳು ಲಿಪಿಯ ಪುಸ್ತಕಗಳ ಅಧ್ಯಯನ ಮಾಡಿದ್ದಾರೆ. ತುಳು ಭಾಷೆ ಇನ್ನಷ್ಟು ಸಶಕ್ತವಾಗಿ ಬೆಳೆಯಲು ಮುಂದಿನ ಜನಾಂಗಕ್ಕೆ ತುಳು ಲಿಪಿ ಕಲಿಸುವ ಪ್ರಯತ್ನ ಮಾಡಬೇಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲ ಹೇಳಿದರು.
ನಗರದ ತುಳು ಭವನದಲ್ಲಿ ಬುಧವಾರ ವಿವಿಧ ಭಾಷಾ ಅಕಾಡೆಮಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ತುಳು
ಭಾಷೆಯ ಪಠ್ಯವನ್ನು ಶಾಲೆಗಳಲ್ಲಿ ಕಲಿಸಲಾಗುತ್ತಿದೆ. ತುಳು ಲಿಪಿ ಕಲಿಸುವ ಚಿಂತನೆ ಮಾಡಬೇಕು. ಆಸಕ್ತರಿಗೆ ತುಳು ಲಿಪಿ ಕಲಿಸುವ ನಿಟ್ಟಿನಲ್ಲಿ ತುಳು ಅಕಾಡೆಮಿಯೂ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.
ಭಾಷಾ ಅಕಾಡೆಮಿಗಳ ಮೂಲಕ ತುಳುನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ನಡೆಯುತ್ತಿದೆ. ಇದರಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಜಾತಿ, ಮತ, ಧರ್ಮವನ್ನು ಮೀರಿದ ತುಳು ಭಾಷೆಗೆ ಎಲ್ಲರನ್ನು ಬೆಸೆಯುವ ಶಕ್ತಿ ಇದೆ. ತುಳುಭವನ ತುಳುನಾಡಿನ ಗೌರವದ ಪ್ರತೀಕ. ಅದನ್ನು ಪೂರ್ಣಗೊಳಿಸಲು ಸರ್ಕಾರದಿಂದ ಅನುದಾನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.
ಸಚಿವೆ ಡಾ.ಜಯಮಾಲ ಅವರನ್ನು ಅಭಿನಂದಿಸಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ.ನಾಯ್ಕ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮ್ಮದ್ ಅಕಾಡೆಮಿಗಳ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಸಲ್ಲಿಸಿದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತುಳು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಉಪಸ್ಥಿತರಿದ್ದರು. ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಲಕ್ಷ್ಮಣ ಪ್ರಭು ಸ್ವಾಗತಿಸಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಬಶೀರ್ ಬೈಕಂಪಾಡಿ ವಂದಿಸಿದರು. ತುಳು ಸಾಹಿತ್ಯ ಅಕಾಡೆಮಿ ಸದಸ್ಯ ತಾರನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ನಿರೂಪಿಸಿದರು.

ಅಕಾಡೆಮಿ ಅಧ್ಯಕ್ಷರ ಪ್ರಯಾಣ ಭತ್ಯೆ 30 ಸಾವಿರ ರೂ, ಮಾಸಿಕ ಗೌರವ ಧನ 25 ಸಾವಿರ ರೂ, ದೂರವಾಣಿ ಬಿಲ್ 3 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಸದಸ್ಯರಿಗೆ ಪ್ರತ್ಯೇಕವಾಗಿ ಗೌರವಧನ ನೀಡಲು ಸಾಧ್ಯವಿಲ್ಲ.
– ಡಾ.ಜಯಮಾಲ, ಸಚಿವೆ

ಶಬರಿಮಲೆ ಪ್ರಸ್ತಾಪಕ್ಕೆ ಕತ್ತರಿ!: ಸಚಿವರನ್ನು ಅಭಿನಂದಿಸಿದ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮ್ಮದ್ ಶಬರಿಮಲೆ ವಿಷಯ ಉಲ್ಲೇಖಿಸಿದರು. ತಕ್ಷಣ ತಡೆದ ಸಚಿವೆ ಜಯಮಾಲ ಆ ವಿಷಯ ಮಾತನಾಡದಂತೆ ಸೂಚಿಸಿದರು.

ಮಾತೃಪೂರ್ಣ ಯೋಜನೆ ಮಾರ್ಪಾಡು ಚಿಂತನೆ
ಬಂಟ್ವಾಳ: ಗರ್ಭಿಣಿ, ಬಾಣಂತಿಯರು ದಿನಂಪ್ರತಿ ಅಂಗನವಾಡಿ ಕೇಂದ್ರಗಳಿಗೆ ಬಂದು ಮಧ್ಯಾಹ್ನದ ಬಿಸಿಯೂಟ ಹಾಗೂ ನಿಗದಿತ ಮಾತ್ರೆ ಸೇವಿಸಬೇಕೆಂಬ ಮಾತೃಪೂರ್ಣ ಯೋಜನೆ ಅನುಷ್ಠಾನ ಕ್ರಮಗಳನ್ನುದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಟ್ಟಿಗೆ ಮಾರ್ಪಡು ಮಾಡಲು ಚಿಂತನೆ ನಡೆಸಲಾಗುವುದು ಎಂದು ಸಚಿವೆ ಡಾ.ಜಯಮಾಲ ಭರವಸೆ ನೀಡಿದರು.
ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ನಿಯೋಗ, ಮಾತೃಪೂರ್ಣ ಯೋಜನೆ ವಿಫಲವಾಗಲು ಕಾರಣವಾದ ಅಂಶಗಳನ್ನು ಸಚಿವೆ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭ ಮನವರಿಕೆ ಮಾಡಿದೆ. ಈ ವೇಳೆ ಉಪಸ್ಥಿತರಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನ ಕ್ರಮ ಬದಲಾಗಬೇಕು ಎಂದು ಸಚಿವರನ್ನು ಒತ್ತಾಯಿಸಿದರು. ದ.ಕ.ಜಿಲ್ಲೆಯಲ್ಲಿ ಈ ಯೋಜನೆ ಶೇ.24ರಷ್ಟು ಮಾತ್ರ ಯಶಸ್ವಿಯಾಗಿದೆ ಎಂದು ಇಲಾಖಾ ಉಪನಿರ್ದೇಶಕ ಸುಂದರ ಪೂಜಾರಿ ಸಚಿವರಿಗೆ ಮಾಹಿತಿ ನೀಡಿದರು.

ಸಂಗೀತ, ಯಕ್ಷಗಾನಕ್ಕೆ ಹೆಚ್ಚುವರಿ ಅನುದಾನ
ಮಂಗಳೂರು: ಶಾಸ್ತ್ರೀಯ ಸಂಗೀತ, ಯಕ್ಷಗಾನ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದ್ದರೆ ಪ್ರಸ್ತಾವನೆ ಸಲ್ಲಿಸಿ ಎಂದು ಇಲಾಖೆ ಅಧಿಕಾರಿಗಳಿಗೆ ಸಚಿವೆ ಡಾ.ಜಯಮಾಲ ಹೇಳಿದರು.
ದ.ಕ.ಜಿ.ಪಂ.ನಲ್ಲಿ ಬುಧವಾರ ಕನ್ನಡ ಸಂಸ್ಕೃತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಜಿಲ್ಲೆಯ ಕಲಾವಿದರ, ಕಲಾ ತಂಡಗಳ ಹಾಗೂ ಇಲಾಖೆ ನೆರವು ಪಡೆಯುತ್ತಿರುವವರ ಸಮಗ್ರ ಪಟ್ಟಿ ಸಹಿತ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ಜಯಂತಿ ಕಾರ್ಯ ಕ್ರಮಗಳ ವರದಿ ಸಲ್ಲಿಸುವಂತೆಯೂ ಸೂಚಿಸಿದರು. ಇಲಾಖೆಗೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಇದರ ಸದ್ಬಳಕೆಯಾಗಬೇಕು. ಈ ಬಗ್ಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಎಲ್ಲ ಕಾರ್ಯಕ್ರಮಗಳನ್ನು ದಾಖಲೀಕರಣ ಮಾಡಬೇಕೆಂದು ಸಚಿವೆ ಹೇಳಿದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...