ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿ

ತಿ.ನರಸೀಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೌಟಿಲ್ಯ ಆರ್.ರಘು ಹೇಳಿದರು.

ಕುಟುಂಬ ರಾಜಕಾರಣ ಮತ್ತು ಅಧಿಕಾರ ದಾಹವನ್ನು ಹತ್ತಿರದಿಂದ ಕಂಡಿರುವವರ ವಿರುದ್ಧ ಕೆಲ ಕಾರ್ಯಕರ್ತರು ಅಸಮಾಧಾನ ಹೊಂದಿದ್ದಾರೆ. ಹೀಗಾಗಿಯೇ ಮಂಡ್ಯದಲ್ಲಿ ಶಾಸಕರು ಹಾಗೂ ಸಚಿವರು ಕೂಡ ನೇರವಾಗಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ಸಮ್ಮಿಶ್ರ ಸರ್ಕಾರ ಆಂತರಿಕ ಭಿನ್ನಮತದಿಂದ ಪತನಗೊಳ್ಳಲಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಚುನಾವಣೆಯಲ್ಲಿ ಗೆದ್ದು ಮೋದಿ ಅವರ ಸರ್ಕಾರದಲ್ಲಿ ಮಂತ್ರಿಯಾಗಲಿದ್ದಾರೆ ಎಂದು ಹೇಳಿದರು.

ಹಿರಿಯ ಮುಖಂಡ ಎಂ.ಅಪ್ಪಣ್ಣ ಮಾತನಾಡಿದರು. ಪಕ್ಷದ ಟೌನ್ ಅಧ್ಯಕ್ಷ ಬಿ.ವೀರಭದ್ರಪ್ಪ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಎ.ಎನ್.ರಂಗುನಾಯಕ ಇದ್ದರು.