VIDEO| ಬಣ್ಣ ಹಚ್ಚುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಶಿಕ್ಷಕನ ಬಂಧನ

Mirzapur teacher
Published on

ಲಖನೌ: ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಘಟನೆಯೂ ಉತ್ತರಪ್ರದೇಶದ ಮಿರ್ಜಾಪುರದ ಕತ್ರಾದಲ್ಲಿ ನಡೆದಿದ್ದು ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ದುರದೃಷ್ಟಕರ ಘಟನೆ

ಐಟಿಐ ಕಾಲೇಜಿನ ಶಿಕ್ಷಕ ಒಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದು ಇದು ದುರದೃಷ್ಟಕರ ಸಂಗತಿ ಎಂದು ಬೇಸರವನ್ನು ಹೊರಹಾಕಿದ್ದಾರೆ.

ಅತ್ಯಾಚಾರಿ ಒಬ್ಬನನ್ನು ಆರಮಾಗಿ ಒಡಾಡಿಕೊಂಡು ಇರಲು ಬಿಟ್ಟಿರುವುದನ್ನು ನೋಡಿದರೆ ನಮ್ಮ ಸಮಾಜದ ಸ್ವಾಸ್ಥ್ಯ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆಯೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ತ್ವರಿತ ಕ್ರಮ

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂತೋಷ್​ ಮಿಶ್ರಾ ದೂರು ದಾಖಲಾದ 24 ಘಂಟೆಯೊಳಗೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಘಟನೆಯೂ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆದಿದ್ದು ಬಣ್ಣ ಹಚ್ಚುವ ನೆಪದಲ್ಲಿ ಆರೋಪಿ ಶಿಕ್ಷಕ ವಿಜಯ್​ ಸಿಂಗ್​ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಟ್ವಿಟರ್​ನಲ್ಲಿ ವಿಡಿಯೋ ಶೇರ್​ ಮಾಡಿ ಮಾಹಿತಿ ನೀಡಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net