
ಕಡಬ: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಂಘ ಸಭೆ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಸಂಚಾಲಕ ಜಯಸೂರ್ಯ ರೈ ಮಾದೋಡಿ ಉದ್ಘಾಟಿಸಿದರು. ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ದಿವಿಶ್ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ಮಾಧ್ಯಮದ ಮುಖ್ಯಶಿಕ್ಷಕ ನಾರಾಯಣ ಭಟ್ ಶೈಕ್ಷಣಿಕ ಮಾಹಿತಿ ನೀಡಿದರು. ಕನ್ನಡ ಮಾಧ್ಯಮದ ಮುಖ್ಯಶಿಕ್ಷಕ ವಿನಯ ವಿ.ಶೆಟ್ಟಿ ತರಗತಿವಾರು ಪಾಲಕ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಬೆಟ್ಟಂಪಾಡಿ ಶಾಖೆಗೆ ವರ್ಗಾವಣೆಗೊಂಡ ಬ್ಯಾಂಕ್ ಆಫ್ ಬರೋಡಾದ ಕಾಣಿಯೂರು ಶಾಖಾ ಪ್ರಬಂಧಕ ಅತಿಥ್ ರೈ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಹಿರಿಯ ಶಿಕ್ಷಕಿ ಸವಿತಾ ಕೆ. ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಣಿಧಿ ಉಡುಪ ಪ್ರಾರ್ಥಿಸಿದರು. ಶಿಕ್ಷಕಿ ಕವಿತಾ ವಿ.ರೈ ಸನ್ಮಾನಿತರನ್ನು ಪರಿಚಯಿಸಿದರು. ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ.ರೈ ನಿರೂಪಿಸಿದರು. ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ ವಂದಿಸಿದರು.
ತಾಲೂಕು ಕಚೇರಿ ಅಧಿಕಾರಿ ವಿರುದ್ಧ ಕಠಿಣ ಕ್ರಮ: ಕಂದಾಯ ಸಚಿವ ಕೆ.ರಾಜನ್ ಸೂಚನೆ
ಕಾಸರಗೋಡಲ್ಲಿ ಹೆದ್ದಾರಿ ಫಲಕಗಳಲ್ಲಿ ಕನ್ನಡ ಕಡ್ಡಾಯ: ಕೇಂದ್ರ ಸರ್ಕಾರ ಸೂಚನೆ : ಪ್ರಾಧಿಕಾರದ ಹೋರಾಟಕ್ಕೆ ಸಂದ ಜಯ