More

    ಕತ್ತರಿಯಿಂದ ಹಲ್ಲೆ ಮಾಡಿ ಶಾಲೆಯ ಮೊದಲ ಮಹಡಿಯಿಂದ ವಿದ್ಯಾರ್ಥಿನಿಯನ್ನು ತಳ್ಳಿದ ಶಿಕ್ಷಕಿ!

    ನವದೆಹಲಿ: ಶಿಕ್ಷಕಿಯೊಬ್ಬಳು 5ನೇ ತರಗತಿಯ ವಿದ್ಯಾರ್ಥಿನಿಯ ತಲೆಗೆ ಕತ್ತರಿಯಿಂದ ಹೊಡೆದಿದ್ದಾಳೆ. ಇಷ್ಟಕ್ಕೇ ಸುಮ್ಮನಾಗದೆ ವಿದ್ಯಾರ್ಥಿನಿಯನ್ನು ಶಾಲೆಯ ಒಂದನೇ ಮಹಡಿಯಿಂದ ಕೆಳಗೆ ತಳ್ಳಿ, ಅಮಾನುಷವಾಗಿ ವರ್ತಿಸಿದ್ದಾಳೆ. ಈ ಘಟನೆ ದೆಹಲಿಯ ರಾಣಿ ಝಾನ್ಸಿ ರಾಣಿ ರಸ್ತೆ ಬಳಿಯ ಮಾಡೆಲ್ ಬಸ್ತಿ ಎದುರು ಇರುವ ಪ್ರಾರ್ಥಿಕ್ ವಿದ್ಯಾಲಯದಲ್ಲಿ ಸಂಭವಿಸಿದೆ.

    ಘಟನೆ ಸಂಭವಿಸುತ್ತಿದ್ದಂತೆ, ಕೂಡಲೇ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

    ಬೆಳಗ್ಗೆ 11.15ರ ಸುಮಾರಿಗೆ ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿ ಹಲ್ಲೆ ಮಾಡಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದಾಳೆ ಎಂಬ ಮಾಹಿತಿ ಫೋನ್ ಕರೆಯ ಮೂಲಕ ಪೊಲೀಸ್ ಠಾಣೆಗೆ ಬಂದಿದೆ. ಕೂಡಲೇ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಅದಾಗಲೇ ಗಾಯಗೊಂಡ ವಿದ್ಯಾರ್ಥಿನಿಯನ್ನು ನಗರದ ಹಿಂದೂರಾವ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಡಿ.ಬಿ.ಜಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಾಹಿತಿ ನೀಡಿರುವುದು ವರದಿಯಾಗಿದೆ.

    ಸದ್ಯ ಆರೋಪಿ ಶಿಕ್ಷಕಿ ಗೀತಾ ದೇಶ್ವಾಲ್​​ಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಈಕೆಯ ಮೇಲೆ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿಯನ್ನು ಹಲ್ಲೆ ಮಾಡಿ, ಮಹಡಿಯಿಂದ ತಳ್ಳಿ ಹಾಕಲು ಕಾರಣವೇನು ಎಂಬುದು ಇನ್ನಷ್ಟೇ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts