More

    ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು

    ಜೈಪುರ: ಪ್ರತಿಯೊಬ್ಬರಿಗೂ ಶಿಕ್ಷಣ ಅತಿಮುಖ್ಯ. ಶಿಕ್ಷಣ ನೀಡಲು ಶಿಕ್ಷಕ ಕೂಡ ಅಷ್ಟೇ ಮುಖ್ಯ. ಶಿಕ್ಷಣ ನೀಡಿ, ಉತ್ತಮ ಮನುಷ್ಯರನ್ನಾಗಿ ಮಾಡಬೇಕಾದ ಶಿಕ್ಷಕನೇ ಮೃಗನಾಗಿಬಿಟ್ಟರೆ? ಆ ಶಿಕ್ಷಕನೇ ವಿದ್ಯಾರ್ಥಿಗಳ ಜತೆ ಅಸಭ್ಯವಾಗಿ ವರ್ತಿಸಲಾರಂಭಿಸಿದರೆ?

    ಇದನ್ನೂ ಓದಿ: ಚಿನ್ನಾಭರಣ ಪ್ರಿಯರಿಗೆ ಬಿಗ್​ ಶಾಕ್​! ಒಂದೇ ವಾರದಲ್ಲಿ ಶೇ. 2 ಏರಿದ ಗೋಲ್ಡ್​ ರೇಟ್​!

    ಪಾಠ ಹೇಳಿಕೊಡಬೇಕಾದ ಶಿಕ್ಷಕನೊಬ್ಬ, ಮಾರ್ಕ್ಸ್​ ಬೇಕೆಂದರೆ ನನ್ನ ಬಳಿ ಸೆಕ್ಸ್​ ಮಾಡುವ ರೀತಿ ಇರಬೇಕು ಎಂದು ವಿದ್ಯಾರ್ಥಿನಿಯರ ಎದುರು ಬೇಡಿಕೆ ಇಟ್ಟಿರುವ ಘಟನೆ ರಾಜಸ್ಥಾನದ ನೀಮ್ರಾನಾದಲ್ಲಿ ನಡೆದಿದೆ. ಮೇಲಧಿಕಾರಿಯ ಎದುರು ವಿದ್ಯಾರ್ಥಿನಿಯರು ಶಿಕ್ಷಕನ ಕಾಮದಾಸೆಗಳನ್ನು ಬಿಚ್ಚಿಟ್ಟಿದ್ದು, ಇದೀಗ ಶಿಕ್ಷಕ ಜೈಲು ಪಾಲಾಗಿದ್ದಾನೆ.

    ನೀಮ್ರಾನಾದ ಸರ್ಕಾರಿ ಶಾಲಾ ಶಿಕ್ಷಕ ದೇವ್​ ಪ್ರಕಾಶ್​ ಯಾದವ್​ (45) ಆರೋಪ ಎದುರಿಸುತ್ತಿರುವ ಶಿಕ್ಷಕ. ಈತ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ವಿದ್ಯಾರ್ಥಿನಿಯರ ಗುಪ್ತಾಂಗ ಮುಟ್ಟುವುದು, ಅಸಭ್ಯ ರೀತಿಯಲ್ಲಿ ವರ್ತನೆ ಮಾಡುತ್ತಿದ್ದನಂತೆ. ಒಳ್ಳೆಯ ಮಾರ್ಕ್ಸ್​ ಬೇಕಾದರೆ, ನನ್ ಜತೆ ದೈಹಿಕವಾಗಿ ಹೊಂದಿಕೊಳ್ಳಿ ಎಂದು ಹೇಳುತ್ತಿದ್ದನಂತೆ.

    ಇದನ್ನೂ ಓದಿ: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಏಮ್ಸ್​ ಆಸ್ಪತ್ರೆಗೆ ದಾಖಲು!

    ಶಿಕ್ಷಕನ ಈ ನೀತಿಯಿಂದ ಬೇಸತ್ತಿದ್ದ ವಿದ್ಯಾರ್ಥಿನಿಯರು, ಮೇಲಧಿಕಾರಿ ಶಾಲೆಯ ಮೇಲ್ವಿಚಾರಣೆಗೆ ಬಂದಾಗ, ಅವರ ಎದುರು ಶಿಕ್ಷಕನ ಬಗ್ಗೆ ದೂರುಗಳನ್ನು ಇಟ್ಟಿದ್ದಾರೆ. ಸೂಕ್ಷ್ಮತೆಯನ್ನು ಅರಿತ ಅಧಿಕಾರಿಗಳು ಶಿಕ್ಷಣ ಇಲಾಖೆ ವಿಚಾರ ಮುಟ್ಟಿಸಿದ್ದು, ಪೊಲೀಸ್​ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ವಿಚಾರವಾಗಿ ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. (ಏಜೆನ್ಸೀಸ್​)

    21 ವರ್ಷ ರೇಪ್​ ಮಾಡಿ ಕೊನೆಗೂ ಕೊಂದೇ ಬಿಟ್ಟ ಪಾಗಲ್​ ಪ್ರೇಮಿ! ಅಮ್ಮನ ಬಾಯಿಯಿಂದಲೇ ಹೊರಬಿತ್ತು ಮಗಳ ನೋವಿನ ಕಥೆ

    ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts