More

    ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು

    ಕುರುಗೋಡು: ವಿದ್ಯಾರ್ಥಿಗಳ ಉತ್ತಮ ಬದುಕಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಶಿಕ್ಷಕರ ಕರ್ತವ್ಯವಾಗಿದೆ ಎಂದು ಬಿಇಒ ಸಿದ್ಧಲಿಂಗ ಮೂರ್ತಿ ಹೇಳಿದರು.

    ಇದನ್ನೂ ಓದಿ: ವಿದ್ಯಾರ್ಥಿಗಳಿಗಾಗಿ ವಿಶೇಷ ತರಬೇತಿ ನೀಡುವ ಶಿಕ್ಷಕ; ಚಿಕ್ಕಲಿಂಗದಹಳ್ಳಿ ಸರ್ಕಾರಿ ಶಾಲೆಯಲ್ಲೊಬ್ಬರು ಮಾದರಿ ಟೀಚರ್

    ಪಟ್ಟಣದ ಶಿಕ್ಷಕರ ನೌಕರರ ಸಂಘದ ಕಚೇರಿಯಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಗ್ರಾಮೀಣ ಕ್ಲಸ್ಟರ್ ಶಿಕ್ಷಕರ ಗುರು ಸ್ಪಂದನ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.

    ಮಕ್ಕಳ ಭವಿಷ್ಯ ಉಜ್ವಲವಾಗಿ ರೂಪಿಸುವಲ್ಲಿ ಗುರುಗಳ ಪಾತ್ರ ಬಹು ದೊಡ್ಡದ್ದು, ಶಿಕ್ಷಕರ ಕಾರ್ಯ ಉತ್ತೇಜನಕಾರಿಯಾಗಿ, ಉತ್ತಮ ಶಿಕ್ಷಣ ನೀಡುವ ಮೂಲಕ ಮಾದರಿಯಾಗಬೇಕು, ಶಿಕ್ಷಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಗುರು ಸ್ಪಂದನಾ ಕಾರ್ಯಕ್ರಮ ಉತ್ತಮವಾಗಿದೆ. ತಾಲೂಕು ವ್ಯಾಪ್ತಿಯಲ್ಲಿ ಶಾಲೆ ಹಾಗೂ ಶಿಕ್ಷಕರ ಯಾವುದೇ ಸಮಸ್ಯೆ ಹಾಗೂ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದರು.

    ನೌಕರರ ಸಂಘದ ಅಧ್ಯಕ್ಷ ಗುಂಡಪ್ಪನವರ ನಾಗರಾಜ್ ಮಾತನಾಡಿ, ಶಿಕ್ಷಕರ ಸಮಸ್ಯೆ ಬಗೆಹರಿಸಿ, ಆಯಾ ತಿಂಗಳ ಕೊನೆಯ ದಿನದಂತೆ ವೇತನವನ್ನು ಎಲ್ಲ ಶಿಕ್ಷಕರಿಗೂ ಕೊಡಿಸುವುದರ ಜತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಿಕ್ಷಣಧಿಕಾರಿಗಳ ಕಾರ್ಯ ಶ್ಲಾಘನೀಯ ಎಂದರು.
    ಕಾರ್ಯದರ್ಶಿ ಜಿ.ಶಿವಶಂಕರ್, ಸಹ ಕಾರ್ಯದರ್ಶಿ ಶೇಕ್ಷಾವಲಿ, ಸಂಘಟನಾ ಕಾರ್ಯದರ್ಶಿ ಸಿದ್ದಪ್ಪ, ಎಚ್.ದೇವಣ್ಣ, ಗವಿಸಿದ್ದಪ್ಪ, ಬಸವಾರಾಜ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts