

ಮಹರಾಷ್ಟ್ರ: ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಮಹಿಳಾ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಥಾಣೆಯಲ್ಲಿ ನಡೆದಿದೆ.
ಏಪ್ರಿಲ್ 19 ರಂದು ಇಲ್ಲಿನ ಖಾಸಗಿ ಶಾಲೆಯ 6 ನೇ ತರಗತಿಯ ಶಿಕ್ಷಕರು, ವಿದ್ಯಾರ್ಥಿಗಳಿಗೆ ತಮ್ಮ ನೋಟ್‌ಬುಕ್‌ಗಳಲ್ಲಿ "ನಾಳೆ ನನ್ನ ಶುಲ್ಕವನ್ನು ತರಲು ನಾನು ಮರೆಯುವುದಿಲ್ಲ ಎಂದು 30 ಬಾರಿ ಬರೆಯಲು ವಿದ್ಯಾರ್ಥಿಗಳಿಗೆ ಹೇಳಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಬರೆಯಲು ಹೇಳಿರುವ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಪ್ರತಿಭಟನೆಯನ್ನು ಪ್ರಾರಂಭಿಸಿದರು.
ಥಾಣೆ ಮುನ್ಸಿಪಲ್ ಕಾರ್ಪೊರೇಷನ್ (ಟಿಎಂಸಿ) ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ಸಿವಿಕ್ ಕಮಿಷನರ್ ಅಭಿಜಿತ್ ಭಂಗಾರ್ ಅವರು ಶಾಲೆಗೆ ಭೇಟಿ ನೀಡಿ ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಶಿಕ್ಷಣಾಧಿಕಾರಿಗೆ ಆದೇಶಿಸಿದ್ದಾರೆ. ಶಿಕ್ಷಣಾಧಿಕಾರಿ ವಿಚಾರಣೆ ನಡೆಸಿದ ನಂತರ ಶಾಲಾ ಆಡಳಿತ ಮಂಡಳಿ ಶಿಕ್ಷಕಳನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಶಾಲೆಗೆ ಸೂಚಿಸಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಶಾಲೆಗೆ ಎಚ್ಚರಿಕೆ ನೀಡಲಾಗಿದೆ. ಶಾಲೆಯವರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಶಿಕ್ಷಣ ಇಲಾಖೆಯು ಅದನ್ನು ಅನುಸರಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.