ಬಸ್​ ಹತ್ತಲು ತಡಮಾಡಿದ ವಿದ್ಯಾರ್ಥಿಗಳಿಗೆ ಬೆತ್ತದಿಂದ ಹೊಡೆದ ಶಿಕ್ಷಕ! ಪ್ರವಾಸಿಗರಿಂದ ತರಾಟೆ, ವಿಡಿಯೋ ವೈರಲ್​

Untitled-1
Published on

ಕುಂದಾಪುರ: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕರೊಬ್ಬರು ಹೊಡೆಯುತ್ತಿದ್ದುದನ್ನು ಗಮನಿಸಿದ ಇತರ ಪ್ರವಾಸಿಗರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿಗಳು ಆನೆಗುಡ್ಡೆಗೆ ಪ್ರವಾಸ ಬಂದಿದ್ದರು. ಕ್ಷೇತ್ರ ದರ್ಶನ ಬಳಿಕ ಮರಳಿ ಬಸ್​ ಹತ್ತಲು ವಿದ್ಯಾರ್ಥಿಗಳು ತಡಮಾಡಿದರೆಂಬ ಕಾರಣಕ್ಕೆ ಶಿಕ್ಷಕ ಈ ಮಕ್ಕಳಿಗೆ ಬೆತ್ತದಿಂದ ಹೊಡೆದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಇತರ ಪ್ರವಾಸಿಗರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಚಾರಿಸಲು ಬಂದ ಪ್ರವಾಸಿಗರಿಗೂ ಬೈದ ಶಿಕ್ಷಕನಿಗೆ ಸ್ಥಳೀಯರು ಛೀಮಾರಿ ಹಾಕಿದ್ದು, ಇಡೀ ದೃಶ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net