ತೆಲಂಗಾಣ: ( Teacher ) ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಕ್ರಿಸ್ ಮಸ್ ಉಡುಗೊರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ವಿತರಿಸಿದ್ದಾನೆ. ಈ ವಿಷಯ ತಿಳಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯರು ಶಿಕ್ಷಕರಿಗೆ ದೂರು ನೀಡಿದ್ದ ಬೆನ್ನಲ್ಲೇ ಈ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಎಲ್ಲರೆಡ್ಡಿಪೇಟೆ ಮಂಡಲದ ನಾರಾಯಣಪುರದ ಸರ್ಕಾರಿ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಲರಾಜು, ಕ್ರಿಸ್‌ಮಸ್ ಉಡುಗೊರೆ ಹೆಸರಿನಲ್ಲಿ ಸುಮಾರು 100 ವಿದ್ಯಾರ್ಥಿಗಳಿಗೆ ಉಡುಗೊರೆ ವಿತರಿಸಿದರು. ಉಡುಗೊರೆ ಪ್ಯಾಕ್ ಆಟಿಕೆಗಳು, ಬಿಸ್ಕತ್ತುಗಳು, ಚಾಕೊಲೇಟ್ಗಳು, ಪೆನ್ನುಗಳು ಮತ್ತು ಬೈಬಲ್ ಪುಸ್ತಕಗಳನ್ನು ಒಳಗೊಂಡಿತ್ತು ಎನ್ನಲಾಗಿದೆ.
ಈ ವಿಷಯ ತಿಳಿದ ಸ್ಥಳೀಯರು ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳಿಂದ ಗಿಫ್ಟ್ ಪ್ಯಾಕ್ ಗಳನ್ನು ವಶಪಡಿಸಿಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರು ಮಂಡಲ ವಿದ್ಯಾಧಿಕಾರಿಗೆ ವಿಡಿಯೋ ಹಾಗೂ ಫೋಟೋ ಸಮೇತ ದೂರು ನೀಡಿದ್ದಾರೆ. ಶಿಕ್ಷಕರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಥಳೀಯರಿಗೆ ತಿಳಿಸಿದರು. ಮಾಹಿತಿ ಪಡೆದ ಎಂಇಒ ಕೃಷ್ಣಹರಿ, ಎಸ್‌ಎಸ್‌ಐ ರಮಾಕಾಂತ್ ಶಾಲೆಗೆ ಆಗಮಿಸಿ ತನಿಖೆ ಆರಂಭಿಸಿದರು.
ಪೊಲೀಸರು ಸ್ಥಳಕ್ಕೆ ಬಂದು ಗಿಫ್ಟ್ ಪ್ಯಾಕ್ ಬಾಕ್ಸ್ ಗಳನ್ನು ವಶಪಡಿಸಿಕೊಂಡರು. ಶಿಕ್ಷಕ ರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಿಕ್ಷಣಾಧಿಕಾರಿ ಜಗನ್ ಮೋಹನ್ ರೆಡ್ಡಿ ದೂರು ನೀಡಿದ್ದಾರೆ. ಲಿಂಗರಾಜು ಅವರನ್ನು ಅಮಾನತುಗೊಳಿಸಿ ಡಿಇಒ ಪ್ರಕಟಿಸಿದರು. ಈ ರೀತಿ ಅಪಪ್ರಚಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಪ್ರಕರಣ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.