More

    ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮುಖ್ಯಶಿಕ್ಷಕ; ಅಮಾನತು

    ಚಿತ್ರದುರ್ಗ: ಶಾಲೆಯ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಘಟನೆ ಸಂಬಂಧ ದೂರು ದಾಖಲಾಗಿದ್ದು, ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಶಿವಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಅಕ್ಟೋಬರ್ 25ರಂದು ಘಟನೆ ನಡೆದಿದ್ದು, ಗಾಯಾಳು ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ FIR ದಾಖಲಾಗಿದೆ.

    ಶಾಚಾಲಯ ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡು ಕರ್ತವ್ಯ ಲೋಪ ಎಸಗಿದ್ದೀರಾ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೊರಡಿಸಿರುವ ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

    CTR Acid Attack

    ದನ್ನೂ ಓದಿ: ಹುಲಿ ಉಗುರು ಪ್ರಕರಣ; ಬಿಗ್ ಬಾಸ್​ ಮಾಜಿ ಸ್ಪರ್ಧಿ ಆರ್ಯವರ್ಧನ್​ಗೆ ನೋಟಿಸ್​ ಜಾರಿ

    ಪ್ರಕರಣದ ಹಿನ್ನಲೆ

    ಅ.25ರಂದು ದಸರಾ ರಜೆ ಮುಗಿಸಿ ಮಕ್ಕಳು ಖುಷಿಯಿಂದಲೇ ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದರು. ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕ ರಂಗಸ್ವಾಮಿ ವಿದ್ಯಾರ್ಥಿಗಳಿಗೆ ಶೌಚಾಲಯ ತೊಳೆಯಲು ಸೂಚಿಸಿದ್ದರಂತೆ.ಅದೇ ವೇಳೆ ಎರಡನೇ ತರಗತಿ ವಿದ್ಯಾರ್ಥಿನಿ ಸಿಂಚನಾ(8) ನೋಡಲೆಂದು ಅಲ್ಲಿಗೆ ತೆರಳಿದ್ದಾಳೆ. ಆಗ ಕೋಪಗೊಂಡ ಮುಖ್ಯ ಶಿಕ್ಷಕ ರಂಗಸ್ವಾಮಿ ಶೌಚಾಲಯ ತೊಳೆಯಲು ಇರಿಸಿದ್ದ ಆಸಿಡ್ ತೆಗೆದುಕೊಂಡು ಎರಚಿದ್ದರು. 

    ಈ ಪರಿಣಾಮ ಸಿಂಚನಾಳ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗಾಯಾಳು ಬಾಲಕಿಯ ತಾಯಿ ಪವಿತ್ರಾ ಆಗ್ರಹಿಸಿದ್ದರು. ಅದರಂತೆಯೇ ಈಗ ಮುಖ್ಯಶಿಕ್ಷಕ ರಂಗಸ್ವಾಮಿ ವಿರುದ್ಧ ಬಾಲನ್ಯಾಯ ಕಾಯ್ದೆ, ಐಪಿಸಿ ಸೆಕ್ಷನ್ 284 ಹಾಗೂ 337ರ ಅಡಿ FIR ದಾಖಲಾಗಿದೆ.

    ದಸರಾ ರಜೆಯ ಬಳಿಕ ಇಂದು ಶಾಲೆ ಪುನರಾರಂಭಗೊಂಡಿದೆ. ಹೀಗಾಗಿ, ಕೆಲ ಹಿರಿಯ ವಿದ್ಯಾರ್ಥಿಗಳೊಂದಿಗೆ ಶಾಲೆ ಸ್ವಚ್ಚಗೊಳಿಸಲಾಯಿತು. ಶೌಚಾಲಯ ಸ್ವಚ್ಛತೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೆವು. ಆಗ ಸಿಂಚನಾ ಅಲ್ಲಿಗೆ ಬಂದಿದ್ದಳು. ನೀನು ಹೋಗಮ್ಮ ಎನ್ನುವಷ್ಟರಲ್ಲಿ ಪಾಕೆಟ್ ಕಟ್ ಮಾಡಿದ ಪುಡಿ ಸಿಂಚನಾಳ ಮೇಲೆ ಬಿದ್ದಿತು. ಯಾವುದೇ ದುರುದ್ದೇಶದಿಂದ ಎರಚಿಲ್ಲ ಎಂದು ಮುಖ್ಯಶಿಕ್ಷಕ ರಂಗಸ್ವಾಮಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts