ರಾಜಸ್ಥಾನ: ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ರಾಜಸ್ಥಾನದ ಗಂಗಾನಗರದಲ್ಲಿ ವರದಿಯಾಗಿದೆ.
ಇದನ್ನೂ ಓದಿ: 800 ಕೋಟಿ ರೂ. ಗಳಿಸಿದ ‘ಜವಾನ್’; ಸಿನಿಮಾ ಆಸ್ಕರ್ಗೆ ತಲುಪಬೇಕು: ನಿರ್ದೇಶಕ ಅಟ್ಲೀ
ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದ ಆರೋಪಿಸಿದ ಪೋಷಕರು, ಶಿಕ್ಷಕನನ್ನು ಮನಬಂದಂತೆ ಥಳಿಸಿದ್ದಾರೆ. ಆತನ ಬಟ್ಟೆ ಹರಿಯುವಂತೆ ಹೊಡೆದ ಕುಟುಂಬಸ್ಥರು, ವ್ಯಕ್ತಿಯನ್ನು ಶಾಲೆಯಿಂದ ಹೊರಗೆ ಕರೆತಂದು ತಲೆ ಮತ್ತು ದೇಹದ ಮೇಲೆ ಕಪ್ಪು ಬಣ್ಣವನ್ನು ಸುರಿದು ಆಕ್ರೋಶ ಹೊರಹಾಕಿದ್ದಾರೆ.
मामला गंगानगर जिले का।
पहले महिला ने की चप्पल से पिटाई की फिर किया अध्यापक का किया मुंह काला।*गांव 7 डीडी में एक टीचर ने स्कूल में लड़कियों को करता था परेशान गांव वालों ने मिलकर अच्छे से की उसकी धुलाई और मुंह काला करके स्कूल से बाहर निकाला,, pic.twitter.com/M5SNPQYQPm— Mαɳιʂԋ Kυɱαɾ αԃʋσƈαƚҽ 🇮🇳🇮🇳 (@Manishkumarttp) September 17, 2023
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ. ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರಾಜೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಭಾರತದ ಈ ಗ್ರಾಮದಲ್ಲಿ ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿ ಎನಿಸಿದರೂ ಇದು ಸತ್ಯ
“ಸರ್ಕಾರಿ ಶಿಕ್ಷಕನ ವಿರುದ್ಧ ಶನಿವಾರ ಪ್ರಕರಣ ರಿಜಿಸ್ಟರ್ ಆಗಿದ್ದು, ಭಾನುವಾರ ಶಿಕ್ಷಕ ಕ್ರಾಸ್ ಎಫ್‌ಐಆರ್ ದಾಖಲಿಸಿದ್ದಾರೆ. ಈಗ ವಿಷಯವನ್ನು ತನಿಖೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).