ಮಕ್ಕಳ ಪ್ರೀತಿ, ಅಭಿಮಾನಗಳ ದ್ಯೋತಕ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಿವೃತ್ತ ಪ್ರಾಂಶುಪಾಲ ದಿನೇಶ್ ಚೌಟ ಹೇಳಿಕೆ

New Project (27)
Published on

ಮೂಡುಬಿದಿರೆ: ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಅಭಿಮಾನಗಳ ದ್ಯೋತಕವಾಗಿದೆ. ಡಾ.ರಾಧಾಕೃಷ್ಣ ಅವರ ಜ್ಞಾನ ಮತ್ತು ಸಾಧನೆ ಶಿಕ್ಷಣ ವೃತ್ತಿಯಲ್ಲಿರುವ ನಮಗೆಲ್ಲರಿಗೂ ಮಾದರಿ. ಇಂದು ನನ್ನ ಶಿಷ್ಯರಲ್ಲೊಬ್ಬರಾದ ಯುವರಾಜ ಜೈನರ ಸಾಧನೆ ನನಗೆ ಸಂತಸವನ್ನುಂಟು ಮಾಡಿದೆ. ಅವರ ಸಾಧನೆ ಇತರರಿಗೂ ಪ್ರೇರಣೆ ಎಂದು ನಿವೃತ್ತ ಪ್ರಾಂಶುಪಾಲ ದಿನೇಶ್ ಚೌಟ ಹೇಳಿದರು.

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಡಾ.ರಾಜಶ್ರೀ ಬಿ., ರಾಷ್ಟ್ರಮಟ್ಟದ ವಿಕಸನ ತರಬೇತುದಾರ, ಪ್ರಶಸ್ತಿ ವಿಜೇತ ಶಿಕ್ಷಕ ರಾಜೇಂದ್ರ ಭಟ್, ಉಜಿರೆ ಎಸ್‌ಡಿಎಂ ಕಾಲೇಜಿನ ಸಹಪ್ರಾಧ್ಯಾಪಕ ಗಜಾನನ ಆರ್.ಭಟ್ ಹಾಗೂ ಎಸ್‌ಡಿಎಂ ಕಾಲೇಜಿನ ಉಪಪ್ರಾಂಶುಪಾಲರಾದ ನಂದಾ ಕುಮಾರಿ ಕೆ.ಪಿ.ಅವರನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಮನೋರಮಾ ಸಂಸ್ಥೆಯ ಮಾಸ ಪತ್ರಿಕೆ ಬಿಡುಗಡೆಯಾಯಿತು. 100 ಅಂಕ ತೆಗೆದ ವಿಷಯವಾರು ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಪುರಸ್ಕರಿಸಲಾಯಿತು.

ಕಾರ್ಯದರ್ಶಿ ರಶ್ಮಿತಾ ಜೈನ್, ಪಿಯು ಕಾಲೇಜು ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಸಿಬಿಎಸ್ಸಿ ಶಾಲೆ ಪ್ರಾಂಶುಪಾಲ ಪ್ರಸಾದ, ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಶಿವಪ್ರಸಾದ ಭಟ್ ಉಪಸ್ಥಿತರಿದ್ದರು. ಯಶಸ್ವಿನಿ ಮತ್ತು ದಿವ್ಯಾಲಕ್ಷ್ಮಿ ನಿರೂಪಿಸಿದರು.

ಒಳ್ಳೆಯ ಗುರುವನ್ನು ಪಡೆಯಲು ಹಾಗೂ ಒಳ್ಳೆಯ ಶಿಷ್ಯವೃಂದ ಪಡೆಯಲು ಯೋಗ ಬೇಕು. ನಾನು ಉಪನ್ಯಾಸಕ ವೃತ್ತಿ ಆರಂಭಿಸಿದಾಗ ನನಗೆ ಪಾಠ ಮಾಡಿದ ಗುರುಗಳೇ ನನ್ನ ಸಹೋದ್ಯೋಗಿಗಳಾಗಿದ್ದರು. ಈ ರೀತಿ ನಮ್ಮ ವಿಭಾಗದಲ್ಲಿ ನಾಲ್ಕು ತಲೆಮಾರುಗಳ ಗುರು ಶಿಷ್ಯ ಪರಂಪರೆ ಇತ್ತು. ನನ್ನನ್ನು ಆ ಸಂದರ್ಭದಲ್ಲಿ ಕೈ ಹಿಡಿದು ನಡೆಸಿದ ಗುರುಗಳಿಗೆ ನಾನು ಋಣಿ. ಯುವರಾಜ್ ಜೈನ್ ಅಧ್ಯಕ್ಷ, ಎಕ್ಸಲೆಂಟ್ ವಿದ್ಯಾಸಂಸ್ಥೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net