

ಕೋಟ: ಮಾತೃ ಸಂಸ್ಥೆಯಲ್ಲಿನ ಗುರುಗಳನ್ನು ಮತ್ತು ಬೋಧಕೇತರ ಸಿಬ್ಬಂದಿಯನ್ನು ಗುರುತಿಸಿ ಅಭಿನಂದಿಸುವ ಮೂಲಕ ಇಂದಿನ ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಗುರುವಿನ ಮಹತ್ವದ ಅರಿವು ಮೂಡಿಸಬೇಕು ಎಂದು ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೇಂಪಿ ರಮಾನಂದ ಭಟ್ ಹೇಳಿದರು.
ಕೋಟದ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿವೇಕ ಹಿಂದಿನ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.
ಬಾಲಕಿಯರ ಪ್ರೌಢಶಾಲೆಯಲ್ಲಿ ನಿವೃತ್ತ ಪ್ರಾಂಶುಪಾಲ ಎಸ್.ನಾಗೇಶ್ ಶಾನುಭಾಗ್ ಮತ್ತು ನಿವೃತ್ತ ಮುಖ್ಯಶಿಕ್ಷಕ ಪಿ.ಶ್ರೀಪತಿ ಹೇರ್ಳೆ ಶಿಕ್ಷಕರನ್ನು ಅಭಿನಂದಿಸಿದರು. ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾದ ಎಚ್.ವೆಂಕಟರಮಣ ಸೋಮಯಾಜಿ, ಕೆ.ಜನಾರ್ದನ ಹಂದೆ, ಸುಧಾಕರ್, ರೇವತಿ ಐತಾಳ, ಸುಶೀಲಾ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಎರಡು ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಕೆ.ಜಗದೀಶ ನಾವಡ, ವಿವೇಕ ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಜಗದೀಶ ಹೊಳ್ಳ ಸ್ವಾಗತಿಸಿದರು. ಹಿರಿಯ ಸಹ ಶಿಕ್ಷಕ ಎ.ವೆಂಕಟೇಶ ಉಡುಪ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪ್ರೀತಿರೇಖಾ ವಂದಿಸಿದರು.