

ಮಂಡ್ಯ: ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಕಲಿಕೆಯ ಬಗ್ಗೆ ಆಸಕ್ತಿ ಹೆಚ್ಚಿಸಲು ಉತ್ತೇಜನ ನೀಡುತ್ತದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಅಖಿಲ ಕರ್ನಾಟಕ ಕರಾವಳಿ ಸಾಂಸ್ಕೃತಿಕ ಒಕ್ಕೂಟದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭಾವಂತ ಮಕ್ಕಳು ಹಣವಿಲ್ಲದ ಕಾರಣಕ್ಕೆ ಓದು ನಿಲ್ಲಿಸಬಾರದು. ಒಂದು ವೇಳೆ ಆರ್ಥಿಕ ಸಮಸ್ಯೆ ಎದುರಾದರೆ ನನ್ನಿಂದಾಗುವ ನೆರವು ನೀಡುತ್ತೇನೆ ಎಂದರು.
ಪತಂಜಲಿ ಯೋಗ ಶಿಕ್ಷಕ ಎಸ್.ಶಂಕರನಾರಾಯಣಶಾಸ್ತ್ರಿ, ಒಕ್ಕೂಟದ ಅಧ್ಯಕ್ಷ ಟಿ.ಸದಾಶಿವಭಟ್, ಲಯನ್ಸ್ ಮಾಜಿ ಗವರ್ನರ್ ಡಾ.ನಾಗರಾಜು ವಿ ಭೈರಿ, ಮಕ್ಕಳ ತಜ್ಞ ಡಾ.ಪಿ.ಎಂ.ಜಗದೀಶ್ ಕುಮಾರ್, ನಿಕಟಪೂರ್ವ ಅಧ್ಯಕ್ಷ ಡಾ.ಎಸ್.ಶ್ರೀನಿವಾಸಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ, ಖಜಾಂಚಿ ಜಿ.ಕೆ. ಶೆಣೈ ಇತರರಿದ್ದರು.
ಇದೇ ವೇಳೆ ವಿ.ಸಿ ಫಾರ್ಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಜಿ.ಸಿ.ರಜನಿ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಎಸ್ಎಸ್ಎಲ್ಸಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕರಾವಳಿ ಬಡಗು ತಿಟ್ಟು ನುರಿತ ಕಲಾವಿದರು ಕಂಸವಧೆ ಎಂಬ ಯಕ್ಷಗಾನ ಪ್ರದರ್ಶನ ಜರುಗಿತು.