ಕುಂದಾಪುರದಲ್ಲಿ ಶಿಕ್ಷಕರ ದಿನಾಚರಣೆ

gan (7)
Published on

ಕುಂದಾಪುರ: ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ, ಗಂಗೊಳ್ಳಿ ರೋಟರಿ ಕ್ಲಬ್ ಜಂಟಿ ಆಶ್ರಯದಲ್ಲಿ ಮೇಲ್‌ಗಂಗೊಳ್ಳಿಯ ಅಂಬೇಡ್ಕರ್ ಸಭಾಭವನದಲ್ಲಿ ಶನಿವಾರ ಶಿಕ್ಷಕರ ದಿನ ಆಚರಿಸಲಾಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ನಿವೃತ್ತ ಮುಖ್ಯಶಿಕ್ಷಕ ಜಿ.ವಿಶ್ವನಾಥ್ ಭಟ್, ಸರ್ಕಾರಿ ಕಿರಿಯ ಪ್ರಾಥಮಿಕ(ಹವೇ) ಶಾಲೆ ಮುಖ್ಯಶಿಕ್ಷಕ ಗುರುರಾಜ್ ಆಚಾರ್ಯ, ಸಹ ಶಿಕ್ಷಕ ಯೋಗೀಶ್, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಂಘ ಜಿಲ್ಲಾಧ್ಯಕ್ಷೆ ಫಿಲೋಮಿನಾ ರ್ನಾಂಡಿಸ್, ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ, ಸಹನಾ, ಅಕ್ಷರ ದಾಸೋಹ ಕಾರ್ಯಕರ್ತರಾದ ಶಕುಂತಲಾ ಖಾರ್ವಿ, ಮೂಕಾಂಬು ಅವರನ್ನು ಸನ್ಮಾನಿಸಲಾಯಿತು.

ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸಂಚಾಲಕ ಈಶ್ವರ ಗಂಗೊಳ್ಳಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ದೀಪಾ ಸುರೇಶ್, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಅಧ್ಯಕ್ಷೆ ಸುಮಿತ್ರ ಈಶ್ವರ್, ವಕೀಲ ಆನಂದ್ ಕೆ., ಜ್ಯೋತಿ ಆನಂದ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರಶ್ಮಿತಾ ಸ್ವಾಗತಿಸಿದರು. ಸಾನ್ವಿ ನಿರೂಪಿಸಿದರು. ಅನ್ವಿತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net