More

    ಶಿಕ್ಷಕರಿಂದ ಶೈಕ್ಷಣಿಕ ಕೊಂಡಿ ಭದ್ರ

    ಬೆಳಗಾವಿ: ಕರೊನಾ ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳ ಮನೆ-ಮನೆಗೆ ತೆರಳಿ ಪಾಠ ಮಾಡುವ ಮೂಲಕ ಕಳಚಿ ಬೀಳಲಿದ್ದ ಶೈಕ್ಷಣಿಕ ಕೊಂಡಿಯನ್ನು ಶಿಕ್ಷಕರು ಭದ್ರಪಡಿಸಿದ್ದಾರೆ ಎಂದು ಶಾಸಕ ಅನಿಲ ಬೆನಕೆ ಹೇಳಿದ್ದಾರೆ.

    ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ನಗರದ ಸೇಂಟ್ ಆಂಥೋನಿ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್-19 ಪರಿಣಾಮದಿಂದಾಗಿ ಈ ಬಾರಿ ಶಿಕ್ಷಕರ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

    ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸುತ್ತಾರೆ. ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕರ ಕಲ್ಯಾಣ ನಿಧಿಯಿಂದ 19 ಹಾಗೂ ಜಿಪಂನಿಂದ 16 ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಎಚ್.ವಿ.ದರ್ಶನ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

    ಕಾರ್ಯಕ್ರಮ ಬಹಿಷ್ಕರಿಸಿದ ಪದಾಧಿಕಾರಿಗಳು: ದೈಹಿಕ ಅಂತರ ಕಾಪಾಡಿಕೊಳ್ಳಲು ವೇದಿಕೆ ಮೇಲೆ ಕೆಲವೇ ಆಸನ ವ್ಯವಸ್ಥೆ ಮಾಡಲಾಗಿತ್ತು. ಇದರಿಂದಾಗಿ ಶಿಕ್ಷಕರ ಸಂಘದ ಅಧ್ಯಕ್ಷರನ್ನು ವೇದಿಕೆ ಮೇಲೆ ಆಮಂತ್ರಿಸದ ಕಾರಣದಿಂದ ಅಸಮಾಧಾನಗೊಂಡ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು
    ಸಮಾರಂಭ ಬಹಿಷ್ಕರಿಸಿ, ಸಭಾಗೃಹದಿಂದ ಹೊರನಡೆದರು.

    ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಜಯಕುಮಾರ ಹೆಬಳಿ ಮಾತನಾಡಿ, ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ ಎಲ್ಲ ಶಿಕ್ಷಕರನ್ನೂ ಆಹ್ವಾನಿಸಬೇಕು. ಆದರೆ, ಅಧಿಕಾರಿಗಳು ಆದೇಶ ಪಾಲಿಸದೆ ಶಿಕ್ಷಕರಿಗೆ ಅವಮಾನ ಮಾಡಿದ್ದಾರೆ. ಸಮಾರಂಭದ ವೇದಿಕೆಗೆ ಸಂಘಟನೆಯ ಅಧ್ಯಕ್ಷರನ್ನೂ ಆಹ್ವಾನಿಸಿಲ್ಲ.

    ಸೇವಾ ಅವಧಿಯಲ್ಲೇ ಮೊದಲ ಬಾರಿ ಇಂತಹ ಅಪಮಾನ ಎದುರಿಸಿದ್ದೇವೆ. ಇಲಾಖೆಯು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts