More

    ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ – ವಿಪ ಸದಸ್ಯ ಶಶೀಲ್ ನಮೋಶಿ ಭರವಸೆ

    ಕೊಪ್ಪಳ: ಶಿಕ್ಷಕರ, ಉಪನ್ಯಾಸಕರ ಸಮಸ್ಯೆ ಪರಿಹಾರ ಹಾಗೂ ಬೇಡಿಕೆ ಈಡೇರಿಕೆಗೆ ಆದ್ಯತೆ ನೀಡಲಾಗುವುದೆಂದು ವಿಪ ಸದಸ್ಯ ಶಶೀಲ್ ನಮೋಶಿ ಭರವಸೆ ನೀಡಿದರು.

    ನಗರದ ಸರ್ಕಾರಿ ನೌಕರರ ಭವನದಲ್ಲಿ ಗುರುವಾರ ವಿವಿಧ ಸಂಘಟನೆಗಳು ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎನ್‌ಪಿಎಸ್ ರದ್ಧತಿ, ಅತಿಥಿ ಉಪನ್ಯಾಸಕರ ಕಾಯಂಗೊಳಿಸುವುದು, ಬಡ್ತಿ ಹೊಂದಿದ ಶಿಕ್ಷಕ, ಉಪನ್ಯಾಸಕರ ವೇತನ ತಾರತಮ್ಯವಿದೆ. ದೈಹಿಕ ಶಿಕ್ಷಕರ ಸಿಆರ್ ಬದಲಾವಣೆ, ಮುರಾರ್ಜಿ ವಸತಿ ಶಾಲೆಗಳ ಶಿಕ್ಷಕರ ಸಮಸ್ಯೆಗಳೂ ಸಾಕಷ್ಟಿವೆ. 371 ಜೆ ಲೋಪದೋಷಗಳು, ಚಿತ್ರಕಲಾ ಶಿಕ್ಷಕರ ಸಮಸ್ಯೆ, ಪ್ರೌಢ ಶಾಲೆಯಿಂದ ಕಾಲೇಜಿಗೆ ಉಪನ್ಯಾಸಕರ ಬಡ್ತಿ, ಅನುದಾನಿತ ಪ್ರೌಢ ಶಾಲಾ ಶಿಕ್ಷಕರ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

    ಮಾಧ್ಯಮಿಕ ಶಿಕ್ಷಕರ ಸಂಘ, ಅತಿಥಿ ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಕರ ಸಂಘ, ಮುರಾರ್ಜಿ ವಸತಿ ಶಾಲಾ ಶಿಕ್ಷಕರ ಸಂಘ, ವಿಕಲಚೇತನರ ಶಿಕ್ಷಕರ ಸಂಘ, ಮುಖ್ಯೋಪಾಧ್ಯಾಯರ ಸಂಘ, ಅನುದಾನಿತ ಪ್ರೌಢ ಶಾಲಾ ಶಿಕ್ಷಕರ ಸಂಘ, ಟಿ.ಜಿ.ಟಿ ಶಿಕ್ಷಕರ ಸಂಘ, ಉಪನ್ಯಾಸಕರ ಸಂಘ, ಡಿಪ್ಲೊಮಾ ಉಪನ್ಯಾಸಕರ ಸಂಘ, ಪ್ರೌಢ ಶಾಲಾ ಪತ್ತಿನ ಸಹಕಾರ ಸಂಘ, ಭಾರತ ಸೇವಾದಳ ಜಿಲ್ಲಾ ಘಟಕದ ಪ್ರತಿನಿಧಿಗಳು ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದರು. ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಹರ್ತಿ, ಶಿಕ್ಷಕ ಹೇಮಣ್ಣ ಕವಲೂರ, ಸಮನ್ವಯಾಧಿಕಾರಿ ಪ್ರಕಾಶ ತಗಡಿನಮನಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣನವರ, ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts