More

    ಶಿಕ್ಷಕರನ್ನು ಹೆಚ್ಚುವರಿಯಾಗಿ ಚುನಾವಣೆಗೆ ಬಳಸಬಾರದು

    ವಿಜಯಪುರ: ಪ್ರಾಥಮಿಕ ಶಾಲೆ ಶಿಕ್ಷಕರನ್ನು ಚುನಾವಣೆ ವೇಳೆ ಮತಗಟ್ಟೆ ಅಧಿಕಾರಿಗಳನ್ನಾಗಿ ನೇಮಕ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಅವರನ್ನು ಹೆಚ್ಚುವರಿ ಬಿಎಲ್‌ಒ ಕೆಲಸದಿಂದ ಮುಕ್ತಿಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ಪ್ರಾಥಮಿಕ ಶಾಲೆ ಶಿಕ್ಷಕರು ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

    ಕಳೆದ 10ರಿಂದ 15ವರ್ಷದಿಂದ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಪ್ರತಿ ಸ್ಥಳೀಯ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಅಧ್ಯಯನದ ಮೇಲೆ ಪರಿಣಾಮ ಬೀರುತ್ತಿದೆ. ನಾವು ಸರ್ಕಾರಿ ಶಿಕ್ಷಕರಾಗಿ ನೇಮಕವಾಗಿದ್ದೇವೆ. ನಮ್ಮ ಕೆಲಸ ಮಕ್ಕಳಿಗೆ ಪಾಠ ಹೇಳುವುದು. ಆದರೆ ಸರ್ಕಾರ ನಮ್ಮನ್ನು ಮತಗಟ್ಟೆ ಅಧಿಕಾರಿಗಳಾಗಿ ಹೆಚ್ಚುವರಿ ಕೆಲಸ ಮಾಡಿಸುತ್ತಿದೆ. ಇದು ಸಹಜವಾಗಿ ಮಕ್ಕಳಿಗೆ ಪಾಠ ಹೇಳುವ ಕೆಲಸಕ್ಕೆ ಅಡ್ಡಿಯಾಗುತ್ತಿದೆ. ಕೂಡಲೇ ನಮ್ಮನ್ನು ಬಿಎಲ್‌ಒ ಕೆಲಸದಿಂದ ಮುಕ್ತಿಗೊಳಿಸಬೇಕು ಎಂದು ಮನವಿ ಮಾಡಿದರು.

    ಕಳೆದ ವಿಧಾನಸಭೆ ಚುನಾವಣೆ ವೇಳೆ ಕೆಲಸ ಮಾಡಿದ ಬಿಎಲ್‌ಒಗಳಿಗೆ ಗಳಿಕೆ ರಜೆಯನ್ನು ಸಹ ಮಂಜೂರು ಮಾಡಬೇಕು. ಬಿಎಲ್‌ಒ ಕೆಲಸ ಮಾಡುತ್ತಿರುವುದು ಹೆಚ್ಚುವರಿ ಭಾರ ಆಗಿದೆ. ಇದರಿಂದ ನಮಗೆ ಮಕ್ಕಳಿಗೆ ಪಾಠ ಹೇಳುವ ಪ್ರವೃತ್ತಿ ಕಡಿಮೆಯಾಗುತ್ತಿದೆ. ಕೂಡಲೇ ಸರ್ಕಾರ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಬಿಎಲ್‌ಒಗಳಾಗಿ ನಿಯುಕ್ತಿ ಮಾಡುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts