More

    ವಾರದೊಳಗೆ ಶಿಕ್ಷಕರ, ಉಪನ್ಯಾಸಕರ ವರ್ಗಾವಣೆ ಕೂಡಲೇ ಆರಂಭಿಸುವಂತೆ ಸಿಎಂ ತಾಕೀತು

    ಬೆಂಗಳೂರು: ನನೆಗುದಿಗೆ ಬಿದ್ದಿರುವ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ತಡಮಾಡದೇ ಆರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿಗೆ ಆದೇಶಿಸಿದ್ದಾರೆ.

    ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಶಿಕ್ಷಕರು, ಉಪನ್ಯಾಸಕರಿಗೆ ವರ್ಗಾವಣೆ ಇಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ, ಈಗಾಗಲೇ ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿ 5 ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿ ಹೊರಡಿಸಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು.

    ಇದನ್ನೂ ಓದಿ: ಪಟಾಕಿ ಚೀಲದ ಮೇಲೇರಿದ ಜೀಪ್ ಬಾನೆತ್ತರ ಚಿಮ್ಮಿದ್ದರಿಂದ ಆರು ಜನಕ್ಕೆ ಗಾಯ

    ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಕಾಲಕಾಲಕ್ಕೆ ನಡೆಯುತ್ತವೆ, ಶಿಕ್ಷಣ ಇಲಾಖೆಯ ನೌಕರರಿಗೆ ತಾರತಮ್ಯ ಮಾಡಲಾಗುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನೌಕರರ ಸಂಘ ವಿನಂತಿಸಿತ್ತು. ಇದೀಗ ಮುಂದಿನ ಒಂದು ವಾರದೊಳಗೆ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.

    ಮಾನವಹಕ್ಕುಗಳ ನೆಪದಲ್ಲಿ ಕಾನೂನು ಉಲ್ಲಂಘಿಸಿದರೆ ಕ್ಷಮಿಸಲಾಗದು: ಯುಎನ್​ಎಚ್​ಆರ್​ಸಿಗೆ ಭಾರತದ ಎಚ್ಚರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts