More

    ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು; ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ

    ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಮುಂದೂಡಿ ಆದೇಶ ಹೊರಡಿಸಲಾಗಿದೆ. ಅಲ್ಲದೆ ತಕ್ಷಣದಿಂದ ಜಾರಿಗೆ ಬರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಆದೇಶವನ್ನು ಹೊರಡಿಸಿದೆ.

    ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಟಿಪ್ಪಣಿಯಲ್ಲಿನ ಸೂಚನೆಯನ್ವಯ ಪ್ರಸ್ತುತ ಚಾಲ್ತಿಯಲ್ಲಿರುವ “ಕೌನ್ಸೆಲಿಂಗ್ ಮುಖಾಂತರ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯುಕ್ತಿಗೊಳಿಸಲು ಕೈಗೊಳ್ಳಲಾಗುತ್ತಿರುವ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ರದ್ದುಗೊಳಿಸಿ ಮುಂದೂಡಲಾಗಿದೆ’ ಎಂದು ಈ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಇಂದು ಅಂದರೆ ಜ. 24ರಂದು ಯಾವುದಾದರೂ ಶಿಕ್ಷಕರಿಗೆ ಕೌನ್ಸೆಲಿಂಗ್​ನಲ್ಲಿ ಸ್ಥಳ ನಿಯುಕ್ತಿ ಆದೇಶ ನೀಡಿದ್ದಲ್ಲಿ ಸದರಿ ಆದೇಶಗಳನ್ನು ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ರದ್ದುಪಡಿಸಿ ಹಿಂಪಡೆಯಲು ಕ್ರಮವಹಿಸುವುದು. ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅದರಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದೂ ಈ ಆದೇಶದಲ್ಲಿ ತಿಳಿಸಲಾಗಿದೆ.

    ಸಂಜೆ ಸ್ನೇಹಿತರ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಒಂದು ಕೆ.ಜಿ. ಚಿನ್ನಾಭರಣ ಕಳವು!

    8 ತಿಂಗಳ ಗರ್ಭಿಣಿಗೆ 1 ವಾರವೂ ಸಮಯ ಕೊಡದೆ ಕೆಲಸದಿಂದ ಕಿತ್ತು ಹಾಕಿದ ಗೂಗಲ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts