ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಆಸಕ್ತಿ ತೋರಿದ ಮಾಜಿ ಕ್ರಿಕೆಟಿಗ

blank
blank

ನವದೆಹಲಿ: ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯಾವಧಿ ಮುಕ್ತಾಯಗೊಳ್ಳಲಿದ್ದು, ನೂತನ ಕೋಚ್ ಆಯ್ಕೆ ಪ್ರಕ್ರಿಯೆಯನ್ನು ಬಿಸಿಸಿಐ ಈಗಾಗಲೆ ಚುರುಕುಗೊಳಿಸಿದೆ. ಇದರ ನಡುವೆ ಟೀಮ್ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್, ನ್ಯೂಜಿಲೆಂಡ್‌ನ ಸ್ಟೀಫನ್ ಫ್ಲೆಮಿಂಗ್, ಆಸೀಸ್‌ನ ರಿಕಿ ಪಾಂಟಿಂಗ್ ಹೆಸರುಗಳು ಹುದ್ದೆಯ ರೇಸ್‌ನಲ್ಲಿ ಕಾಣಿಸಿಕೊಂಡ ಬಳಿಕ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಸಹ ಕೋಚ್ ಹುದ್ದೆಯ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ.

‘ಕ್ರಿಕೆಟ್ ನನಗೆ ಸಾಕಷ್ಟು ನೀಡಿದೆ. ಅವಕಾಶ ಸಿಕ್ಕರೆ ಖಂಡಿತವಾಗಿಯೂ ಮತ್ತೆ ಕ್ರಿಕೆಟ್ ಕ್ಷೇತ್ರಕ್ಕೆ ಬರಲು ಇಷ್ಟಪಡುತ್ತೇನೆ’ ಎಂದಿರುವ 43 ವರ್ಷದ ಹರ್ಭಜನ್, ‘ಟೀಮ್ ಇಂಡಿಯಾ ಆಟಗಾರರಿಗೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಜತೆಗೆ ಡ್ರೈವ್ ಅಥವಾ ಪುಲ್ ಶಾಟ್‌ಗಳನ್ನು ಕಲಿಸುವುದು ಕೋಚ್ ಕೆಲಸವಲ್ಲ. ಏಕೆಂದರೆ ಟೀಮ್ ಇಂಡಿಯಾ ಆಟಗಾರರು ಈಗಾಗಲೇ ಎಲ್ಲವನ್ನೂ ತಿಳಿದಿದ್ದಾರೆ. ಆದರೆ ಉತ್ತಮ ಕೋಚ್ ಅವರಿಗೆ ಸರಿಯಾಗಿ ಮಾರ್ಗದರ್ಶನ ನೀಡಬಹುದು. ಕೋಚ್ ಎಂದರೆ ತಂಡವನ್ನು ನಿರ್ವಹಿಸುವುದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಮೇ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪ್ರಸ್ತುತ ಆಪ್‌ನಿಂದ ರಾಜ್ಯಸಭೆ ಸದಸ್ಯರಾಗಿರುವ ಹರ್ಭಜನ್ ಸಿಂಗ್, ಭಾರತದ ಪರ 103 ಟೆಸ್ಟ್, 236 ಏಕದಿನ ಹಾಗೂ 28 ಟಿ20 ಪಂದ್ಯಗಳನ್ನು ಆಡಿರುವ ಅನುಭವ ಹೊಂದಿದ್ದಾರೆ.

Share This Article

ಹೃದಯಾಘಾತವನ್ನು ತಡೆಯುವ ಸಾಮರ್ಥ್ಯ ಹೊಂದಿರುವ ಎಣ್ಣೆ ಇದು! ಹೊಸ ಸಂಶೋಧನೆಯಿಂದ ಸಾಬೀತು | Oil

Oil: ಭಾರತೀಯ ಅಡುಗೆಮನೆಗಳಲ್ಲಿ ಎಣ್ಣೆ ಹೆಚ್ಚು ಬಳಸುವ ವಸ್ತುಗಳಲ್ಲಿ ಒಂದಾಗಿದೆ. ಎಣ್ಣೆ ಇಲ್ಲದೆ ಬೇಯಿಸಿದ ಆಹಾರಗಳು…

ಈ ಅಭ್ಯಾಸಗಳು ನಿಮ್ಮನ್ನು ಎಂದಿಗೂ ಶ್ರೀಮಂತರಾಗಲು ಬಿಡುವುದಿಲ್ಲ, ಅವುಗಳನ್ನು ತಕ್ಷಣ ಬಿಟ್ಟುಬಿಡಿ | Chanakya Niti

Chanakya Niti: ಅರ್ಥಶಾಸ್ತ್ರ ಮತ್ತು ನೀತಿಶಾಸ್ತ್ರದ ಪಿತಾಮಹ ಎಂದೂ ಕರೆಯಲ್ಪಡುವ ಆಚಾರ್ಯ ಚಾಣಕ್ಯ ಅವರು ತಮ್ಮ…