More

    ತನ್ನ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಮುರಿದ ಟೀಂ ಇಂಡಿಯಾ; ಪಾರುಪತ್ಯ ಮೆರೆದ ಬ್ಯಾಟ್ಸ್​ಮನ್​ಗಳು

    ನವದೆಹಲಿ: ಇತ್ತೀಚಿಗೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ತನ್ನ ಅದ್ಭುತ ಪ್ರದರ್ಶನದ ಮೂಲಕ ಭಾರತ 2-1 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಏಕದಿನ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಒಂದನ್ನು ಬರೆದಿದೆ. ಈ ಮೂಲಕ 2023ರಲ್ಲಿ ಭಾರತದ ಬ್ಯಾಟ್ಸ್​ಮನ್​ಗಳು ತಮ್ಮ ಪಾರುಪತ್ಯವನ್ನು ಮುಂದುವರೆಸಿದ್ದಾರೆ.

    ಶುಕ್ರವಾರ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತದ ಪರ ವಿಕೆಟ್​ ಕೀಪರ್​, ಬ್ಯಾಟ್ಸ್​ಮನ್​ ಸಂಜು ಸ್ಯಾಮ್ಸನ್​ (108 ರನ್, 114 ಎಸೆತ, 6 ಬೌಂಡರಿ, 3 ಸಿಕ್ಸರ್​) ಶತಕ ಸಿಡಿಸುವ ಮೂಲಕ ತಂಡಕ್ಕೆ ನೆರವಾಗಿದ್ದರು. ಈ ಶತಕದೊಂದಿಗೆ ಟೀಮ್ ಇಂಡಿಯಾ ಪಾಲಿಗೆ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿರುವುದು ಮತ್ತಷ್ಟು ವಿಶೇಷವಾಗಿದೆ.

    2023ರಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ತಂಡ ಎಂಬ ದಾಖಲೆ ಟೀಮ್ ಇಂಡಿಯಾ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾದ ಹೆಸರಿನಲ್ಲಿಯೇ ಇತ್ತು. 2017 ರಲ್ಲಿ ಭಾರತೀಯ ಬ್ಯಾಟರ್​ಗಳು ಶತಕಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. 2023 ರಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳಿಂದ ಮೂಡಿಬಂದಿರುವ ಶತಕಗಳ ಸಂಖ್ಯೆ 19. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿನ ತನ್ನದೇ ದಾಖಲೆಯನ್ನು ಭಾರತ ತಂಡ ಸರಿಗಟ್ಟಿದಂತಾಗಿದೆ. ಈ ಮೂಲಕ ಒಡಿಐ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts