

ಬೆಂಗಳೂರು: ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತದ ಟೆಸ್ಟ್ ಮತ್ತು ಏಕದಿನ ತಂಡವನ್ನು ಪ್ರಕಟಿಸಲಾಗಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ವೈಲ್ಯ ಕಂಡ ಟೆಸ್ಟ್ ತಜ್ಞ ಬ್ಯಾಟರ್ ಚೇತೇಶ್ವರ ಪೂಜಾರಗೆ ತಂಡದಿಂದ ಕೊಕ್ ನೀಡಲಾಗಿದ್ದರೆ, ಮತ್ತೋರ್ವ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆಗೆ ಉಪನಾಯಕನಾಗಿ ಬಡ್ತಿ ನೀಡಲಾಗಿದೆ. ರೋಹಿತ್ ಶರ್ಮ ಟೆಸ್ಟ್-ಏಕದಿನ ಎರಡರಲ್ಲೂ ನಾಯಕರಾಗಿ ಮುಂದುವರಿಯಲಿದ್ದಾರೆ.
ಟೆಸ್ಟ್ ತಂಡ:
ರೋಹಿತ್ ಶರ್ಮ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಶುಭಮಾನ ಗಿಲ್, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಕೆಎಸ್ ಭರತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮದ್ ಸಿರಾಜ್, ಮುಕೇಶ್ ಕುಮಾರ್, ಜೈದೇವ್ ಉನಾದ್ಕತ್, ನವದೀಪ್ ಸೈನಿ.
ಏಕದಿನ ತಂಡ:
ರೋಹಿತ್ ಶರ್ಮ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಶುಭಮಾನ್ ಗಿಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜೈದೇವ್ ಉನಾದ್ಕತ್, ಮೊಹಮದ್ ಸಿರಾಜ್, ಉಮ್ರಾನ್ ಮಲಿಕ್, ಮುಕೇಶ್ ಕುಮಾರ್.