More

    WTCನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತ; ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ ಇಲ್ಲಿದೆ ನೋಡಿ

    ನವದೆಹಲಿ: ಪ್ರವಾಸಿ ಇಂಗ್ಲೆಂಡ್​ ವಿರುದ್ಧದ ಐದು ಪಂದ್ಯಗಳ ಟೆಸ್ಟ್​ ಸರಣಿಯನ್ನು ಅತಿಥೇಯರು 4-1 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

    ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಡಿದ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ಪಾಯಿಂಟ್ಸ್​ ಟೇಬಲ್​​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ಮೂರು ಮಾದರಿಗಳಲ್ಲೂ (ಟೆಸ್ಟ್, ಏಕದಿನ ಹಾಗೂ ಟಿ-20) ಅಗ್ರಸ್ಥಾನ ಅಲಂಕರಿಸಿದೆ.

    ಇದನ್ನೂ ಓದಿ: ಯುವಕನ Aತ್ಮಹತ್ಯೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; ಪೊಲೀಸ್​ ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ?

    ಆಸ್ಟೇಲಿಯಾವನ್ನು ಹಿಂದಿಕ್ಕಿರುವ ರೋಹಿತ್ ಶರ್ಮಾ ಬಳಗ, ಟೆಸ್ಟ್ ರ‍್ಯಾಂಕಿಂಗ್‌‌ನಲ್ಲಿ ಅಗ್ರಸ್ಥಾನಕ್ಕೇರಿದೆ. ಭಾರತ ಈಗ 122 ರೇಟಿಂಗ್ ಪಾಯಿಂಟ್ ಹೊಂದಿದೆ. 117 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಭಾರತ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲು ಕಂಡಿರುವ ಇಂಗ್ಲೆಂಡ್ 111 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

    ಏಕದಿನ ಹಾಗೂ ಟ್ವೆಂಟಿ-20 ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಭಾರತವೇ ಅಗ್ರಸ್ಥಾನದಲ್ಲಿ ಕಾಯ್ದುಕೊಂಡಿದೆ. ಏಕದಿನದಲ್ಲಿ ಭಾರತ 121 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ (118 ರೇಟಿಂಗ್ ಪಾಯಿಂಟ್). ಚುಟುಕು ಕ್ರಿಕೆಟ್‌ನಲ್ಲಿ ಭಾರತ 266 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ ಎರಡು (256) ಹಾಗೂ ಆಸ್ಟ್ರೇಲಿಯಾ ಮೂರನೇ (255) ಸ್ಥಾನದಲ್ಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts