

Team India Squad: ಏಷ್ಯಾ ಕಪ್ 2025ರ ಟೂರ್ನಿಗೆ ಭಾರತ ತಂಡ ಯಾವಾಗ ಪ್ರಕಟವಾಗಲಿದೆ? ಯಾರೆಲ್ಲ ಆಡಲಿದ್ದಾರೆ? ಎಂಬ ಕುತೂಹಲ ಕ್ರಿಕೆಟ್ ಪ್ರಿಯರಲ್ಲಿ ತೀವ್ರವಾಗಿ ಕಾಡುತ್ತಿತ್ತು. ಕಡೆಗೂ ಈ ಕೌತುಕಕ್ಕೆ ಇದೀಗ ತೆರೆ ಬಿದ್ದಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಇಂದು ಭಾರತ ತಂಡವನ್ನು ಪ್ರಕಟಿಸಿತು.
ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ನಾಯಕ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಶುಭಮನ್ ಗಿಲ್, ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡ ಸೇರಿದರೆ, ಶ್ರೇಯಸ್ ಅಯ್ಯರ್ ಮತ್ತು ಯಶಸ್ವಿ ಜೈಸ್ವಾಲ್ಗೆ ಸ್ಥಾನ ಸಿಕ್ಕಿಲ್ಲ. ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ ರಿಂಕು ಸಿಂಗ್,(ಏಜೆನ್ಸೀಸ್).