More

    ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲೂ ಕನ್ನಡಿಗ ಕೆಎಲ್ ರಾಹುಲ್‌ಗೆ ಸ್ಥಾನವಿಲ್ಲ; ಅಭಿಮಾನಿಗಳ ಆಕ್ರೋಶ

    ಬೆಂಗಳೂರು: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗದ ಆಯ್ಕೆಯಲ್ಲೇ ಎಡವಟ್ಟು ಮಾಡಿಕೊಂಡು ಹೀನಾಯ ಸೋಲು ಕಂಡಿದ್ದ ಭಾರತ ತಂಡ ಸರಣಿಯ 2ನೇ ಟೆಸ್ಟ್‌ಗೂ ಪಾಠ ಕಲಿತಂತಿಲ್ಲ. ಯಾಕೆಂದರೆ ಭರ್ಜರಿ ಾರ್ಮ್‌ನಲ್ಲಿರುವ ಬ್ಯಾಟ್ಸ್‌ಮನ್ ಹಾಗೂ ಕನ್ನಡಿಗ ಕೆಎಲ್ ರಾಹುಲ್‌ಗೆ ಮೆಲ್ಬೋರ್ನ್‌ನ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲೂ ಆಡುವ ಅವಕಾಶ ನೀಡಲಾಗಿಲ್ಲ.

    ಭಾರತ ತಂಡ ತನ್ನ ಎಂದಿನ ಸಂಪ್ರದಾಯದಂತೆ ಈ ಬಾರಿಯೂ ಟೆಸ್ಟ್ ಪಂದ್ಯಕ್ಕೆ ಮುನ್ನಾದಿನವೇ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಇದರನ್ವಯ, ಶನಿವಾರದಿಂದ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಕೆಎಲ್ ರಾಹುಲ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್ ಪ್ರೇಮಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸೀಮಿತ ಓವರ್ ತಂಡದ ಉಪನಾಯಕ ಕೆಎಲ್ ರಾಹುಲ್ ಅವರನ್ನು ಆಡಿಸದಿರುವ ಟೀಮ್ ಮ್ಯಾನೇಜ್‌ಮೆಂಟ್ ನಿರ್ಧಾರವನ್ನು ಕಟುವಾಗಿ ಟೀಕಿಸಲಾಗುತ್ತಿದೆ.

    ಇದನ್ನೂ ಓದಿ: ಹೂವುಗಳೆಂದರೆ ಇಷ್ಟ ಎಂದ ಅಥಿಯಾ ಶೆಟ್ಟಿ, ಗುಲಾಬಿ ಕಳುಹಿಸಿದ್ರು ಕೆಎಲ್ ರಾಹುಲ್!

    2ನೇ ಟೆಸ್ಟ್‌ಗೆ ಟೀಮ್ ಇಂಡಿಯಾದಲ್ಲಿ 4 ಬದಲಾವಣೆ ಮಾಡಲಾಗಿದೆ. ಪಿತೃತ್ವ ರಜೆಯ ಮೇರೆಗೆ ತವರಿಗೆ ಮರಳಿರುವ ನಾಯಕ ವಿರಾಟ್ ಕೊಹ್ಲಿ, ಗಾಯಗೊಂಡು ಸರಣಿಯಿಂದ ಹೊರಬಿದ್ದಿರುವ ವೇಗಿ ಮೊಹಮದ್ ಶಮಿ, ರನ್‌ಬರ ಎದುರಿಸಿರುವ ಪೃಥ್ವಿ ಷಾ ಮತ್ತು ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ತಂಡದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಆಲ್ರೌಂಡರ್ ರವೀಂದ್ರ ಜಡೇಜಾ, ಮೊಹಮದ್ ಸಿರಾಜ್, ಶುಭಮಾನ್ ಗಿಲ್ ಮತ್ತು ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಈ ಪೈಕಿ ಮೊಹಮದ್ ಸಿರಾಜ್ ಮತ್ತು ಶುಭಮಾನ್ ಗಿಲ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

    ವಿರಾಟ್ ಕೊಹ್ಲಿ ಗೈರಿನಲ್ಲಿ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡುವ ನಿರೀಕ್ಷೆ ಇಡಲಾಗಿತ್ತು. ಇನ್ನು ಮಾಜಿ ನಾಯಕ ಸುನೀಲ್ ಗಾವಸ್ಕರ್ ಅವರಂಥ ಕ್ರಿಕೆಟ್ ವಿಶ್ಲೇಷಕರು, ಕೆಎಲ್ ರಾಹುಲ್ ಅವರನ್ನು ಪೃಥ್ವಿ ಷಾ ಬದಲಿಗೆ ಆರಂಭಿಕರನ್ನಾಗಿ ಆಡಿಸಬೇಕೆಂದು ಒತ್ತಾಯಿಸಿದ್ದರು. ಆದರೆ ಟೀಮ್ ಮ್ಯಾನೇಜ್‌ಮೆಂಟ್, ಕೊಹ್ಲಿ ಜಾಗದಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಕಣಕ್ಕಿಳಿಸುವ ಮೂಲಕ ಬೌಲಿಂಗ್ ವಿಭಾಗವನ್ನು ಬಲಪಡಿಸಲು ಆದ್ಯತೆ ನೀಡಿದೆ. ಭಾರತ ತಂಡ ಅಡಿಲೇಡ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಯಾವುದೇ ದೋಷ ಎದುರಿಸಲಿದ್ದರೂ, ಕೇವಲ 36 ರನ್‌ಗೆ ಕುಸಿದ ಬ್ಯಾಟಿಂಗ್ ವಿಭಾಗವನ್ನು ಬಲಪಡಿಸಲು ಆದ್ಯತೆ ನೀಡದಿರುವುದು ಅಚ್ಚರಿ ತಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts