ಕಾನ್ಪುರದಲ್ಲಿ ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿದ Team India; ತಂಡದಲ್ಲಿ ಎರಡು ಬದಲಾವಣೆ

Ind vs Ban
Published on

ಕಾನ್ಪುರ: ಇಲ್ಲಿನ ಗ್ರೀನ್​ ಪಾರ್ಕ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್​ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್​ ಇಂಡಿಯಾ (Team India) ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ಮಳೆಯ ಕಾರಣದಿಂದಾಗಿ ಪಂದ್ಯ ಒಂದು ಗಂಟೆ ತಡವಾಗಿ ಆರಂಭವಾಗಿದ್ದು, ಅದರಂತೆ ಟಾಸ್​ ಗೆದ್ದ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ ಬೌಲಿಂಗ್​ ಆಯ್ಕೆ ಮಾಡಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಎರಡು ಬದಲಾವಣೆಗಳಾಗಿವೆ.

ಮೊದಲ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನೇ ಭಾರತ ಇಲ್ಲೂ ಕೂಡ ಮುಂದುವರೆಸಿದ್ದು, ಬಾಂಗ್ಲಾದೇಶ ತಂಡದಲ್ಲಿ 2 ಬದಲಾವಣೆಗಳಾಗಿವೆ. ಎರಡನೇ ಟೆಸ್ಟ್​ ಪಂದ್ಯದಲ್ಲೂ ಗೆಲ್ಲುವ ಮೂಲಕ ಭಾರತ ತಂಡ 18ನೇ ಸರಣಿ ಗೆದ್ದ ದಾಖಲೆ ನಿರ್ಮಿಸಲಿದೆ.

ಉಭಯ ತಂಡಗಳ ಪ್ಲೇಯಿಂಗ್​ 11 ಹೀಗಿದೆ

ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ ತಂಡ: ಶದ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net