ಟೀಮ್ ಕುಂದಾಪುರಿಯನ್ಸ್​ನಿಂದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ಇದು ಬದುಕಿನೊಂದಿಗೆ ಬೆಸೆದ ಭಾಷೆ: ನಟ ರಮೇಶ್ ಭಟ್

ಬೆಂಗಳೂರು: ಕುಂದಾಪುರ ಕನ್ನಡ ಬದುಕಿನೊಂದಿಗೆ ಬೆಸೆದ ಭಾಷೆಯಾಗಿದೆ. ಅವರು ತಮ್ಮ ತಾಯಿಗೆ ನೀಡುವಷ್ಟೇ ಗೌರವವನ್ನು ತಮ್ಮ ಭಾಷೆ ನೀಡುತ್ತಾರೆ ಎಂದು ಚಿತ್ರನಟ ರಮೇಶ್ ಭಟ್ ತಿಳಿಸಿದರು.

ಟೀಮ್ ಕುಂದಾಪುರಿಯನ್ಸ್​ನಿಂದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ಇದು ಬದುಕಿನೊಂದಿಗೆ ಬೆಸೆದ ಭಾಷೆ: ನಟ ರಮೇಶ್ ಭಟ್

ಇದನ್ನೂ ಓದಿ: ಸಚಿವ ಮಧು ಬಂಗಾರಪ್ಪ ಅವರದ್ದು ಆಚಾರವಿಲ್ಲದ ನಾಲಿಗೆ

ಟೀಂ ಕುಂದಾಪುರಿಯನ್‌ಸ್‌ ಭಾನುವಾರ ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಹಮ್ಮಿಕೊಂಡ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಾಟಿಸಿ ಮಾತನಾಡಿದರು. ಕುಂದಾಪುರ ಇದು ಬದುಕಿನ ಭಾಷೆಯೇ ಹೊರತು ಉದ್ಯಮದ ಭಾಷೆಯಲ್ಲ. ಹಾಗಾಗಿ ಇಂದಿಗೂ ಕುಂದಾಪುರ ಭಾಷೆ ಜೀವಂತವಾಗಿದೆ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಮಾತೃ ಭಾಷೆ ಹಾಗೂ ಮನೆಯ ಮೂಲ ಭಾಷೆ ಮರೆಯಬಾರದು. ನಮ್ಮ ಭಾಷೆಯ ಮಹತ್ವ ತಿಳಿದುಕೊಂಡು ಪ್ರತಿಯೊಬ್ಬರೂ ವ್ಯವಹರಿಸಬೇಕು ಎಂದರು.

ಟೀಮ್ ಕುಂದಾಪುರಿಯನ್ಸ್​ನಿಂದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ಇದು ಬದುಕಿನೊಂದಿಗೆ ಬೆಸೆದ ಭಾಷೆ: ನಟ ರಮೇಶ್ ಭಟ್

ಇದನ್ನೂ ಓದಿ: ಕರ್ನಾಟಕದ ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಯ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಕುಂದಾಪುರ ರತ್ನ ಪ್ರಶಸ್ತಿ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಸಾಧನೆ ಮಾಡಿದ ಅರೆಹೊಳೆ ಸದಾಶಿವ ರಾವ್, ಚಿತ್ರ ನಿರ್ದೇಶಕ ಯಾಕುಬ್ ಖಾದರ್ ಅವರಿಗೆ ನೀಡಿ ಗೌರವಿಸಲಾಯಿತು. ‘ಕುಂದಾಪುರ ಸಮ್ಮಾನ’ ಗೌರವವನ್ನು ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾನ, ಗೌರಿ ಕೆ., ಮುಳುಗುತಜ್ಞ ಮಂಜುನಾಥ ಕೊಡ್ಲಾಡಿ, ಅಂತಾರಾಷ್ಟ್ರೀಯ ಕ್ರೀಡಾಪಟು ವಿಠ್ಠಲ್, ಸಮಾಜ ಸೇವೆ ದಿನೇಶ್ ಬಾಂದವ್ಯ, ಶಿಕ್ಷಣ ಸುಜಾತ, ಪ್ರಗತಿ ಪರ ಕೃಷಿಕ ಕೃಷ್ಣ ಕುಲಾಲ್ ಆವರ್ಸೆ ಅವರಿಗೆ ನೀಡಿ ಸಮ್ಮಾನಿಸಲಾಯಿತು.

ಟೀಮ್ ಕುಂದಾಪುರಿಯನ್ಸ್​ನಿಂದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ಇದು ಬದುಕಿನೊಂದಿಗೆ ಬೆಸೆದ ಭಾಷೆ: ನಟ ರಮೇಶ್ ಭಟ್
ಶಾಸಕ ಗುರುರಾಜ್ ಗಂಟಿಹೊಳೆ, ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್‌ಟ್‌ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ನಟಿ ಅಮೃತಾ ರಾಮಮೂರ್ತಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದರು.

ಕಡೆಗೂ ‘ಮಂಜುಮ್ಮೆಲ್ ಬಾಯ್ಸ್’ ಹೃದಯ ಗೆದ್ದ ಇಳಯರಾಜ! ನಿಟ್ಟುಸಿರು ಬಿಟ್ಟ ಚಿತ್ರತಂಡ

Share This Article

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

30 ದಿನಗಳಲ್ಲೇ ಸ್ಲಿಮ್ ಆ್ಯಂಡ್​ ಫಿಟ್​ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…