ಪರಿಶ್ರಮ, ನಾವೀನ್ಯತೆಯಿಂದ ತಂತ್ರಜ್ಞಾನ ಪ್ರಗತಿ

technology
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಭೌತಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕ ಡಾ.ಗುರುಮೂರ್ತಿ ಎಸ್.ಸಿ. ಉದ್ಘಾಟಿಸಿದರು.
Published on

ಕುಂದಾಪುರ: ವಿಜ್ಞಾನ ತಂತ್ರಜ್ಞಾನ ಅಭಿವೃದ್ಧಿಗೆ ಬೆನ್ನೆಲುಬು. ಇಂದಿನ ತಂತ್ರಜ್ಞಾನ ಪ್ರಗತಿ ಹಿಂದೆ ವಿಜ್ಞಾನಿಗಳ ಪರಿಶ್ರಮ ಮತ್ತು ನಾವೀನ್ಯತೆ ಅಡಕವಾಗಿದೆ. ಭವಿಷ್ಯದಲ್ಲಿ ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ ತಂತ್ರಜ್ಞಾನ ಮುಂತಾದ ಕ್ಷೇತ್ರ ಹೊಸ ಮಾರ್ಗ ತೆರೆಯಲಿವೆ ಎಂದು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂ.ಐ.ಟಿ.) ಕಾಲೇಜು ಭೌತಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕ ಡಾ.ಗುರುಮೂರ್ತಿ ಎಸ್.ಸಿ. ಹೇಳಿದರು.

ಕುಂದಾಪುರ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಿಜ್ಞಾನ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಭೂಮಿಕಾ ಹಾಗೂ ಮನೋಜ್ ಕುಮಾರ್ ಉಪಸ್ಥಿತರಿದ್ದರು.

ವಿಜ್ಞಾನ ಸಂಘದ ಸಂಚಾಲಕಿ ಅನುಷಾ ಎಲ್. ಸ್ವಾಗತಿಸಿದರು. ವಿದ್ಯಾರ್ಥಿನಿ ಸ್ವರ್ಣಿತಾ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ರಂಜಿತ್ ವಂದಿಸಿದರು. ವಿಜ್ಞಾನ ಕಾರ್ಯಾಗಾರ ಹಾಗೂ ವಿಜ್ಞಾನ ಮಾದರಿ ಪ್ರದರ್ಶನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net