ಕಳೆದ ತಿಂಗಳು, ಇಂಗ್ಲೆಂಡ್‌ನ ಮಹಿಳೆಯೊಬ್ಬರು ಇದೇ ರೀತಿಯ ಘಟನೆಯನ್ನು ಎದುರಿಸಿದರು. ಸಂತ್ರಸ್ತ ಮಹಿಳೆ ಇತ್ತೀಚೆಗೆ ಹೋಟೆಲ್ ಒಂದರಲ್ಲಿ ಪುರುಷನೊಂದಿಗೆ ಸಮಯ ಕಳೆದಿದ್ದರು. ಆದರೆ, ಆ ವ್ಯಕ್ತಿ ಆಕೆಗೆ ತಿಳಿಯದಂತೆ ಖಾಸಗಿ ವಿಡಿಯೋಗಳು ಮತ್ತು ಫೋಟೋಗಳನ್ನು ತೆಗೆದುಕೊಂಡಿದ್ದಾನೆ. ಅಲ್ಲದೆ, ತಾನು ತೆಗೆದುಕೊಂಡ ವಿಡಿಯೋಗಳನ್ನು ಆಕೆಗೆ ಕಳುಹಿಸಿದ್ದಾನೆ. ಇದರ ವಿರುದ್ಧ ಸಂತ್ರಸ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ಇಲ್ಲಿ ಅಚ್ಚರಿಯ ಸಂಗತಿ ಏನೆಂದರೆ, ಈ ಪ್ರಕರಣದ ಬಗ್ಗೆ ನ್ಯಾಯಾಲಯವು ತೆಗೆದುಕೊಂಡ ನಿರ್ಧಾರ. ಅದೇನೆಂದರೆ, ಆರೋಪಿ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಿಲ್ಲ. ಅಂದಹಾಗೆ, ಇದೊಂದೇ ಪ್ರಕರಣವಲ್ಲ. ಇಂತಹ ಅನೇಕ ಘಟನೆಗಳು ಮಹಿಳೆಯರ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿವೆ.