ಲಖನೌ: ಇತ್ತಿಚಿನ ದಿನಗಳಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮಗಳನ್ನು ಜಾರಿಗೆ ತಂದರು ಯಾವುದೇ ಪ್ರಯೋಜನವಾಗುತ್ತಿಲ್ಲ.
ಇದೀಗ ಆಘಾತಕಾರಿ ಘಟನೆಯೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದನ್ನು ವಿರೋಧಿಸಿದ ಯುವತಿಯನ್ನು ಜೀವಂತ ಸುಟ್ಟು ಹಾಕಿರುವ ಘಟನೆ ಉತ್ತರಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ.
ಯಾರು ಇಲ್ಲದ ವೇಳೆ ಕೃತ್ಯ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬಾಲಕಿಯ ತಂದೆ-ತಾಯಿ ಕೆಲಸದ ನಿಮಿತ್ತ ಯುವತಿ ಹಾಗೂ ಆಕೆಯ ಇಬ್ಬರು ಸಹೋದರರನ್ನು ಮನೆಯಲ್ಲಿ ಬಿಟ್ಟು ಹೊರ ಹೋಗಿದ್ದಾರೆ.
ಇದನ್ನು ಗಮನಿಸಿದ ಆರೋಪಿಗಳು ಮನೆಗೆ ನುಗ್ಗಿ ದಾಂಧಲೆ ನಡೆಸಿ ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ. ಈ ವೇಳೆ ಯುವತಿ ಸಹಾಯಕ್ಕಾಗಿ ಕೂಗಿಕೊಂಡಿದ್ದು ಪ್ರತಿರೋಧ ತೋರಿದ್ದಾಳೆ.
ಇದನ್ನೂ ಓದಿ: ಮಹಿಳಾ ಪ್ರಯಾಣಿಕರ ಎದುರಲ್ಲೇ ಯುವಕನ ಅನುಚಿತ ವರ್ತನೆ; ಸಾರ್ವಜನಿಕರ ಸಹಾಯ ಕೋರಿದ ಪೊಲೀಸರು
ಪ್ರತಿರೋಧಿಸಿದ್ದಕ್ಕೆ ಹತ್ಯೆ
ಇದಕ್ಕೆ ಕುಪಿತಗೊಂಡ ಆರೋಪಿಗಳು ಆಕೆಯ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕೂಡಲೇ ಆಕೆಯನ್ನು ನೆರೆಹೊರೆಯವರ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತ್ತಾದರೂ ತೀವ್ರರ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಯುವತಿಯ ಸಹೋದರರು ನೀಡಿದ ಹೇಳಿಕೆಯನ್ನು ಆಧರಿಸಿ ನೆರೆ ಮನೆಯ ನಿವಾಸಿ ಅಬ್ಕಿತ್ ಕುಮಾರ್ನನ್ನು ವಶಕ್ಕೆ ಪಡೆದು ವಿಚಾರಣಗೆ ಒಳಪಡಿಸಲಾಗಿದೆ. ಕಳೆದ ಕೆಲ ದಿನಗಳಿಮದ ಯುವತಿಯನ್ನು ಹಿಂಬಾಲಿಸುತ್ತಿದ್ದ ಆರೋಪಿ ಮಂಗಳವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಕೃತ್ಯ ಎಸಗಿದ್ಧಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.