ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

ಇಂದೋರ್: ಇತ್ತೀಚೆಗೆ ಚಿಕ್ಕವಯಸ್ಸಿನವರೂ ಹೃದಯಾಘಾತಕ್ಕೀಡಾಗಿ ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆ ಪಟ್ಟಿಗೆ ಹದಿಹರೆಯದ ವಿದ್ಯಾರ್ಥಿನಿಯೊಬ್ಬಳೂ ಸೇರಿದ್ದಾಳೆ. ಶಾಲೆಗೆ ತೆರಳಿದ್ದ ಈಕೆ ಅಲ್ಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ. ಮಧ್ಯಪ್ರದೇಶದ ಇಂದೋರ್​ನ ಉಷಾನಗರದಲ್ಲಿರುವ ಶಾಲೆಯೊಂದರಲ್ಲಿ ಈ ಪ್ರಕರಣ ನಡೆದಿದೆ, ಶುಕ್ರವಾರ ಪೊಲೀಸರು ಈ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. 11ನೇ ತರಗತಿ ವಿದ್ಯಾರ್ಥಿನಿ, ವೃಂದಾ ತ್ರಿಪಾಠಿ (16) ಸಾವಿಗೀಡಾದ ವಿದ್ಯಾರ್ಥಿನಿ. ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕಾಗಿ ರಿಹರ್ಸಲ್​ಗೆಂದು ಈಕೆ ಶಾಲೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಗಂಡನ ನಾಲಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡ್ತಿ; … Continue reading ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!