More

    ಬಿಎಸ್ಸಿ ವಿದ್ಯಾರ್ಥಿನಿಗೆ ಮುಖ್ಯಮಂತ್ರಿ ಪಟ್ಟ! ಹಳ್ಳಿ ಹುಡುಗಿಯ ರಾಜಕೀಯ ದರ್ಬಾರ ನೋಡಲು ಸಜ್ಜಾದ ರಾಜ್ಯ

    ದೆಹರಾದೂನ್‌: ಉತ್ತರಾಖಂಡದಲ್ಲಿ ಹದಿಹರೆಯದ ಯುವತಿ ಸೃಷ್ಟಿ ಗೋಸ್ವಾಮಿ ಜನವರಿ 24ರಂದು ಮುಖ್ಯಮಂತ್ರಿಯಾಗಲಿದ್ದಾರೆ. ರಾಷ್ಟ್ರೀಯ ಬಾಲಕಿಯರ ದಿನಾಚರಣೆ ಪ್ರಯುಕ್ತ ಸೃಷ್ಟಿ ಒಂದು ದಿನದ ಮಟ್ಟಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಲಿದ್ದಾರೆ.

    ಇದನ್ನೂ ಓದಿ: ‘8 ವರ್ಷದಿಂದ ಕಪ್​ ಗೆಲ್ಲದಿದ್ದರೂ ಕ್ಯಾಪ್ಟನ್​ ಆಗಿದ್ದು ಹೇಗೆ?’ ಆರ್​ಸಿಬಿ ಕ್ಯಾಪ್ಟನ್​ ಕೊಹ್ಲಿ ಕಾಲೆಳೆದ ಗಂಭೀರ್​

    ಸೃಷ್ಟಿ ಹರಿದ್ವಾರದ ಸಣ್ಣ ಹಳ್ಳಿಯೊಂದರ ಹೆಣ್ಣು ಮಗಳು. ಆಕೆಯ ತಂದೆ ಪ್ರವೀಣ್ ಒಬ್ಬ ಉದ್ಯಮಿ, ಮತ್ತು ತಾಯಿ ಸುಧಾ ಗೃಹಿಣಿ. ರೂರ್ಕಿಯಲ್ಲಿ ಬಿಎಸ್ಸಿ ಅಗ್ರಿಕಲ್ಚರ್ ವಿದ್ಯಾರ್ಥಿಯಾಗಿರುವ ಆಕೆ ಈ ಹಿಂದೆ, ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾಳೆ. ಮೇ 2018 ರಲ್ಲಿ ಅವರು ಉತ್ತರಾಖಂಡ ಬಾಲ ವಿಧಾನಸಭೆಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಳು. ಪ್ರಸ್ತುತ ಬಾಲ ವಿಧಾನಸಭೆಯ ಮುಖ್ಯಮಂತ್ರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

    ಭಾನುವಾರದಂದು ರಾಜ್ಯದ ಮುಖ್ಯಮಂತ್ರಿ ಆಗಲಿರುವ ಸೃಷ್ಟಿ ತ್ರಿವೇಂದರ್ ಸಿಂಗ್ ರಾವತ್ ಸರ್ಕಾರ ನಡೆಸುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಈ ಯೋಜನೆಗಳಲ್ಲಿ ಅಟಲ್ ಆಯುಷ್ಮಾನ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಪ್ರವಾಸೋದ್ಯಮ ಇಲಾಖೆಯ ಹೋಂ ಸ್ಟೇ ಯೋಜನೆ ಮತ್ತು ಇತರ ಅಭಿವೃದ್ಧಿ ಯೋಜನೆಗಳು ಸೇರಿವೆ.

    ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಎಲೆಕ್ಷನ್​! ಇನ್ನೂ ನಾಲ್ಕು ತಿಂಗಳು ಸೋನಿಯಾ ಗಾಂಧಿಯೇ ಅಧ್ಯಕ್ಷೆ

    ಸೃಷ್ಟಿ ಸಿಎಂ ಕಚೇರಿಯನ್ನು ವಹಿಸಿಕೊಳ್ಳುವ ಮೊದಲು, ಉತ್ತರಾಖಂಡ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಯೋಜನೆಗಳ ಬಗ್ಗೆ ತಲಾ ಐದು ನಿಮಿಷಗಳ ಪ್ರಸ್ತುತಿಯನ್ನು ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲಾ ಉನ್ನತ ಅಧಿಕಾರಿಗಳು ಹಾಜರಿರುವುದನ್ನು ಖಚಿತಪಡಿಸಿಕೊಳ್ಳಲು ಉತ್ತರಾಖಂಡ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗವು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ವಿಧಾನಸಭೆ ಕಟ್ಟಡದಲ್ಲಿ ಮಧ್ಯಾಹ್ನ 12 ರಿಂದ 3 ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಗದ ಅಧ್ಯಕ್ಷ ಉಷಾ ನೇಗಿ ಹೇಳಿದ್ದಾರೆ. (ಏಜೆನ್ಸೀಸ್​)

    ಮೋದಿ ಸರ್ಕಾರದಲ್ಲಿ ಡಬಲ್​ ಆದ ಸೆನ್ಸೆಕ್ಸ್​! ಏಳೇ ವರ್ಷದಲ್ಲಿ 25 ಸಾವಿರದಿಂದ 50 ಸಾವಿರಕ್ಕೆ ಜಂಪ್​

    ಎಣ್ಣೆ ಕುಡಿಯಲು ಹೋದವನು ವಾಪಾಸು ಬರಲೇ ಇಲ್ಲ; ಸ್ಕೆಚ್​ ಹಾಕಿ ಕೊಲೆ ಮಾಡಿಸಿದಳಾ ಪತ್ನಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts