More

  ಬಾಲಕರ ಸ.ಪ.ಪೂ.ಕಾಲೇಜು ಮೈದಾನದಲ್ಲಿ ಸಂವಿಧಾನ ಪೀಠಿಕೆ ವಾಚನ ನಾಳೆ

  ಗಂಗಾವತಿ: ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ವಿಶಿಷ್ಟ ರೀತಿಯಲ್ಲಿ ಆಯೋಜಿಸಬೇಕಿದ್ದು, ಶಿಷ್ಟಾಚಾರ ಪಾಲಿಸುವಂತೆ ತಹಸೀಲ್ದಾರ್ ಮಂಜುನಾಥ ಭೋಗಾವತಿ ಹೇಳಿದರು.

  ನಗರದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಮಕ್ಕಳೊಂದಿಗೆ ಸಂವಿಧಾನ ಪೀಠಿಕೆ ವಾಚನದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಸಂಭ್ರಮಾಚರಣೆ ಕಾರ್ಯಕ್ರಮ ನಿಮಿತ್ತ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

  ಸೆ.15ರಂದು ಬಾಲಕರ ಸ.ಪ.ಪೂ.ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅರ್ಥಪೂರ್ಣ ರೀತಿಯಲ್ಲಿ ನಡೆಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಮತ್ತು ಸಂಘ-ಸಂಸ್ಥೆಗಳ ಮುಖಂಡರಿಗೆ ಆಹ್ವಾನಿಸಬೇಕಿದ್ದು, ಮಕ್ಕಳು ಕಡ್ಡಾಯ ಭಾಗವಹಿಸುವಂತೆ ವ್ಯವಸ್ಥೆ ಮಾಡಬೇಕು. ಅಮಂತ್ರಣ ಪತ್ರಿಕೆ ಮುದ್ರಣದ ಜತೆಗೆ ಪ್ರಮುಖರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

  ವಿವಿಧ ಇಲಾಖೆಗಳಿಗೆ ಕಾರ್ಯಕ್ರಮದ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಲಾಯಿತು. ಉಪತಹಸೀಲ್ದಾರ್ ಮಹೆಬೂಬ್‌ಅಲಿ, ಬಿಇಒ ವೆಂಕಟೇಶ ರಾಮಚಂದ್ರಪ್ಪ, ವಿವಿಧ ಇಲಾಖೆ ಅಧಿಕಾರಿಗಳಾದ ಗ್ಯಾನಪ್ಪಗೌಡ, ಶ್ರೀನಿವಾಸ ನಾಯ್ಕ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts