ರಾಣೆಬೆನ್ನೂರ: ಇಲ್ಲಿಯ ತಹಸೀಲ್ದಾರ್ ಹಾಗೂ ನಗರಸಭೆ ಕಚೇರಿಗೆ ಬುಧವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿದ ಅವರು, ಆರ್ಟಿಸಿ ಆಧಾರ ಸೀಡಿಂಗ್ ಪ್ರಗತಿ, ಹೊಸ ಪಡಿತರ ಚೀಟಿ ವಿತರಣೆ, ಅಭಿಲೇಖಾಲಯ ಮತ್ತು ಕಚೇರಿ ಸ್ವಚ್ಛತೆ ಕುರಿತು ಪರಿಶೀಲಿಸಿದರು. ನಂತರ ಉಪನೋಂದಣಾಧಿಕಾರಿ ಕಚೇರಿ, ಭೂ ದಾಖಲೆ ವಿಭಾಗ, ಖಜಾನೆಗೆ ಭೇಟಿ ನೀಡಿ ಕಾರ್ಯವೈಖರಿ ಬಗ್ಗೆ ಪರಿಶೀಲಿಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಕಾಲಮಿತಿಯೊಳಗೆ ವಿಲೆವಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ನಗರಸಭೆಗೆ ಭೇಟಿ ನೀಡಿ ಅವರು, ಖಾತಾ ಬದಲಾವಣೆ ಪ್ರಕ್ರಿಯೆ ಮತ್ತು ಇನ್ನಿತರ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಗರದ ಗಟಾರ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದ ಅವರು, ಗಟಾರ ಸ್ವಚ್ಛತೆಗೆ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಸೀಲ್ದಾರ್ ಆರ್.ಎಚ್. ಭಾಗವಾನ್, ನಗರಸಭೆ ಆಯುಕ್ತ ಕ್ಕೀರಪ್ಪ ಇಂಗಳಗಿ, ಕಂದಾಯ ನಿರೀಕ್ಷಕರಾದ ಅಶೋಕ ಅರಳೇಶ್ವರ, ವಾಗೀಶ ಮಳಿಮಠ ಹಾಗೂ ಸಿಬ್ಬಂದಿ ಇದ್ದರು.
ತಹಸೀಲ್ದಾರ್, ನಗರಸಭೆ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಮೊಸರಿಗೆ ಈರುಳ್ಳಿ ಸೇರಿಸಿ ತಿನ್ನಬಹುದೇ? ತಿಂದ್ರೆ ಏನಾಗುತ್ತದೆ? ಇಲ್ಲಿದೆ ಉಪಯುಕ್ತ ಮಾಹಿತಿ… Curd with Onions
ಮೊಸರಿಗೆ (Curd) ಈರುಳ್ಳಿ ( Onions ) ಸೇರಿಸಿ, ತಿನ್ನಲು ಅನೇಕರು ಇಷ್ಟಪಡುತ್ತಾರೆ. ಆದರೆ, ಆ…
ಪುರುಷರು ಕುಳಿತು or ನಿಂತುಕೊಂಡು ಮೂತ್ರ ವಿಸರ್ಜನೆ ಮಾಡ್ಬೇಕಾ? ಇಲ್ಲಿದೆ ಉಪಯುಕ್ತ ಮಾಹಿತಿ… Urinate Position
ಸಾಮಾನ್ಯವಾಗಿ ಪುರುಷರು ನಿಂತುಕೊಂಡೇ ಮೂತ್ರ ವಿಸರ್ಜನೆ ( Urinate Position ) ಮಾಡುತ್ತಾರೆ. ಆದರೆ, ಈ…
ನಿಮ್ಮ ಅಂಗೈನಲ್ಲಿ H ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ! Palmistry
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…