More

    ತಹಸೀಲ್ದಾರ್ ಹತ್ಯೆಗೆ ಖಂಡನೆ

    ಮೂಡಲಗಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ ಚಂದ್ರಮೌಳೇಶ್ವರ ಹತ್ಯೆ ಖಂಡನೀಯ. ಆರೋಪಿ ಮೇಲೆ ಕಾನೂನು ಕ್ರಮ ಜರುಗಿಸಿ ನೌಕರರ ಹಿತ ಕಾಪಾಡಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ತಹಸೀಲ್ದಾರ್ ಡಿ.ಜೆ.ಮಹಾಂತ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ತಹಸೀಲ್ದಾರ್ ಹತ್ಯೆ ಅಮಾನವೀಯ ಹಾಗೂ ಖಂಡನೀಯ. ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುವ ಸಂದರ್ಭಗಳಲ್ಲಿ ಪದೇ ಪದೆ ಇಂತಹ ಘಟನೆಗಳು ಸಂಭವಿಸುತ್ತಿವೆ. ವಿವಿಧ ಇಲಾಖೆಯ ನೌಕರರು ಪ್ರಾಣ ಭಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಒತ್ತಾಯಿಸಿದರು.

    ಕೊಲೆಗಾರರಿಗೆ ಕಠಿಣ ಶಿಕ್ಷೆಯಾಗಬೇಕು. ರಾಜ್ಯದ ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಭದ್ರತೆ ನೀಡಬೇಕು. ಮೃತರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಕೊಡಬೇಕು. ಅಗತ್ಯ ಆರ್ಥಿಕ ಸೌಲಭ್ಯ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಶಿರಸ್ತೆದಾರ ಶಿವಾನಂದ ಬಬಲಿ, ಆನಂದ ಹಂಜ್ಯಾಗೋಳ, ಕೆ.ಆರ್.ಅಜ್ಜಪ್ಪನವರ, ಎ.ಎಂ.ಮೋಡಿ, ಆರ್.ಎಂ.ಮಹಾಲಿಂಗಪುರ, ರಾಮಚಂದ್ರ ಸಣ್ಣಕ್ಕಿ, ಎಸ್.ಐ. ಸವದತ್ತಿ, ರಾಮಚಂದ್ರ ಸೋನವಾಲಕರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts