More

    ಬಾಲ್ಯವಿವಾಹಮುಕ್ತಿಗೆ ಅಧಿಕಾರಿಗಳ ಪ್ರಯತ್ನ ಅಗತ್ಯ; ತಹಸೀಲ್ದಾರ್ ಹೇಳಿಕೆ

    ಕನಕಗಿರಿ: ಕನಕಗಿರಿಯನ್ನು ಬಾಲ್ಯವಿವಾಹಮುಕ್ತ ತಾಲೂಕಾಗಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಸೀಲ್ದಾರ್ ಸಂಜಯ ಕಾಂಬ್ಳೆ ಹೇಳಿದರು.

    ಪಟ್ಟಣದ ಸಿಡಿಪಿಒ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧ ಮತ್ತು ಸಮನ್ವಯ ಸಮಿತಿ, ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಸಾಗಣೆ ತಡೆ ಸಮಿತಿ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.

    ತಾಲೂಕು ವ್ಯಾಪ್ತಿಯಲ್ಲಿ ಸಾಮೂಹಿಕ ವಿವಾಹ ಆಯೋಜಿಸುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಶಾಶ್ವತ ಗೋಡೆ ಬರಹ ಬರೆಯಿಸಲು ದೇವಸ್ಥಾನಗಳ ಮುಖ್ಯಸ್ಥರಿಗೆ ಸೂಚಿಸಬೇಕು. ಪಂಚಾಯಿತಿ ಆವರಣಗಳಲ್ಲಿಯೂ ಈ ಕುರಿತು ಗೋಡೆಬರಹ ಬರೆಯಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ಸಾಮೂಹಿಕ ವಿವಾಹ ಆಯೋಜಕರು ಕಡ್ಡಾಯವಾಗಿ ತಹಸೀಲ್ದಾರ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಅನುಮತಿ ಪಡೆದ ನಂತರವೇ ಸಾಮೂಹಿಕ ವಿವಾಹ ಆಯೋಜಿಸಬೇಕು. ಬಾಲ್ಯವಿವಾಹ ಕಂಡುಬಂದಲ್ಲಿ, ಸಾಮೂಹಿಕ ವಿವಾಹ ಆಯೋಜಕರು ಸೇರಿ ಸಂಬಂಧಿಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ನಕಲಿ ಶಾಲಾ ದೃಢೀಕರಣ ಪತ್ರ ನೀಡಿದಲ್ಲಿ ಅಂತಹ ಶಾಲೆ ಮುಖ್ಯಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು.

    ತಾಪಂ ಇಒ ಚಂದ್ರಶೇಖರ ಕಂದಕೂರ, ಟಿಎಚ್‌ಒ ಶರಣಪ್ಪ, ಎಸಿಡಿಪಿಒ ಇಮಾಲಪ್ಪ ಡಿ.ಕಂದಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಪವಾರ ಇತರರಿದ್ದರು.


    ಕೇಂದ್ರ ಸರ್ಕಾರ ಮಕ್ಕಳ ಸಂರಕ್ಷಣೆಗಾಗಿ ಮಿಷನ್ ವಾತ್ಸಲ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಅದರನ್ವಯ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಸರ್ಕಾರಿ ಬಾಲಮಂದಿರ ಹಾಗೂ ವಿಶೇಷ ದತ್ತು ಸೇವಾ ಕೇಂದ್ರವನ್ನು ಸಾಂಸ್ಥಿಕ ಸೇವೆಯಡಿ ಸ್ಥಾಪಿಸಿದೆ.
    ವಿರುಪಾಕ್ಷಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts