More

    ಅನುಮತಿರಹಿತ ಗಣೇಶ ಮೂರ್ತಿ ಪ್ರತಿಷ್ಠಾಪನೆಗಿಲ್ಲ ಅವಕಾಶ; ಬಸವರಾಜ ತೆನ್ನಳ್ಳಿ ಹೇಳಿಕೆ

    ಯಲಬುರ್ಗಾ: ಗೌರಿ-ಗಣೇಶ ಹಬ್ಬವನ್ನು ಪ್ರತಿಯೊಬ್ಬರೂ ಶಾಂತಿ, ಸೌಹಾರ್ದದಿಂದ ಆಚರಿಸಬೇಕು ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಸಲಹೆ ನೀಡಿದರು.

    ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗೌರಿ ಗಣೇಶ ಮತ್ತು ಈದ್‌ಮಿಲಾದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಇಲಾಖೆ ಅನುಮತಿ ಪಡೆಯುವುದು ಕಡ್ಡಾಯ. ಅನುಮತಿ ಇಲ್ಲದೆ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

    ಪೊಲೀಸ್, ಜೆಸ್ಕಾಂ, ತಹಸೀಲ್ದಾರ್, ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದು ಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರಿಗೆ ತೊಂದರೆ ಆಗುವಂತೆ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಹೀಗಾಗಿ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

    ಇಲಾಖೆ ನಿಗದಿಪಡಿಸಿದ ಸ್ಥಳದಲ್ಲಿ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು. ಮೆರವಣಿಗೆ ಸಂದರ್ಭದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಶಾಂತಿಯುತವಾಗಿ ಸಡಗರ ಸಂಭ್ರಮದಿಂದ ಹಬ್ಬ ಆಚರಿಸಬೇಕು ಎಂದರು.

    ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಮಾತನಾಡಿ,ಜಿಲ್ಲೆಯಲ್ಲಿ ಯಲಬುರ್ಗಾ ಪಟ್ಟಣ ಭಾವೈಕ್ಯಕ್ಕೆ ಹೆಸರುವಾಸಿಯಾಗಿದೆ. ಹಿಂದು, ಮುಸ್ಲಿಮರು ಸಡಗರ ಸಂಭ್ರಮದಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಆಚರಿಸಬೇಕು. ಪಿಒಪಿ ಮೂರ್ತಿಗೆ ಅವಕಾಶ ಇಲ್ಲ. ಪರಿಸರಸ್ನೇಹಿ ಗಣೇಶ ಮೂರ್ತಿಗೆ ಮಾತ್ರವೇ ಅವಕಾಶ ನೀಡಲಾಗಿದೆ ಎಂದರು.

    ತಾಪಂ ಇಒ ಸಂತೋಷ ಪಾಟೀಲ್, ಡಿವೈಎಸ್ಪಿ ರವಿಕುಮಾರ್, ಪಪಂ ಮುಖ್ಯಾಧಿಕಾರಿ ನಾಗೇಶ, ಪಿಎಸ್‌ಐ ವಿಜಯ ಪ್ರತಾಪ್, ಪ್ರಮುಖರಾದ ಅಂದಾನಗೌಡ ಉಳ್ಳಾಗಡ್ಡಿ, ವೀರಣ್ಣ ಹುಬ್ಬಳ್ಳಿ, ಅಖ್ತರ್‌ಸಾಬ್ ಖಾಜಿ ಮಾತನಾಡಿದರು. ಪಪಂ ಮುಖ್ಯಾಧಿಕಾರಿ ನಾಗೇಶ, ಸದಸ್ಯರಾದ ಅಮರೇಶ ಹುಬ್ಬಳ್ಳಿ, ರೇವಣಪ್ಪ ಹಿರೇಕುರುಬರ್, ವಸಂತ ಭಾವಿಮನಿ, ಕಲ್ಲೂರು ಗ್ರಾಪಂ ಅಧ್ಯಕ್ಷ ನಾಗಯ್ಯ ಗುರುಮಠ, ಸಾರಿಗೆ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts