More

    ವಿಧಾನಪರಿಷತ್​ ಸದಸ್ಯತ್ವಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ; ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಶಾಕ್

    ಬೆಂಗಳೂರು: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ರಾಜ್ಯ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದ್ದು, ವಿಧಾನಪರಿಷತ್​ ಸ್ಥಾನಕ್ಕೆ ಬಿಜೆಪಿಯ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ವಿಧಾನಪರಿಷತ್​ ಸಭಾಪತಿ ಬಸವರಾಜ್​ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದ ತೇಜಸ್ವಿನಿ ಗೌಡ ತಾವು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ಕ್ಕೆ ಮುಕ್ತಾಯವಾಗುತ್ತಿತ್ತು.

    ಇತ್ತ ವಿಧಾನಪರಿಷತ್​ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರು ಕಾಂಗ್ರೆಸ್​ ಸೇರ್ಪಡೆಯಾಗುತ್ತಾರೆ ಎಂದು ಹೇಳಲಾಗಿದೆ. ಕಳೆದ 20 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ತೇಜಸ್ವಿನಿ ಗೌಡ ಅವರು 2004ರಲ್ಲಿ ಕನಕಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಮಾಜಿ ಪ್ರಧಾನಿ ಎಚ್.​ಡಿ. ದೇವೇಗೌಡ ಅವರನ್ನೇ ಸೋಲಿಸಿದ್ದರು. ನಂತರ ದಿನಗಳಲ್ಲಿ ಇವರು ಬಿಜೆಪಿ ಸೇರಿದರು. ಬಿಜೆಪಿ ಇವರನ್ನು ವಿಧಾನ ಪರಿಷತ್​ ಸದಸ್ಯೆಯನ್ನಾಗಿ ಮಾಡಿತು.

    resignation

    ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಬೆಂಗಳೂರು, ಚೆನ್ನೈ ಸೇರಿದಂತೆ ಹಲವೆಡೆ NIA ದಾಳಿ

    ರಾಜೀನಾಮೆಗೆ ಕಾರಣವೇನು?

    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೇಜಸ್ವಿನಿ ಗೌಡ ಅವರು ಬೆಂಗಳೂರು ಗ್ರಾಮಾಂತರ ಇಲ್ಲವೇ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಬೆಂಗಳೂರು ಗ್ರಾಮಾಂತರದಲ್ಲಿ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ತಮಗೆ ಟಿಕೆಟ್‌ ಸಿಗಬಹುದು ಎಂದು ಭಾರಿ ನಿರೀಕ್ಷೆಯಲ್ಲಿ ತೇಜಸ್ವಿನಿ ಇದ್ದರು. ಆದರೆ, ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಬಿಜೆಪಿ ಅಖಾಡಕ್ಕೆ ಇಳಿಸಿತ್ತು. ಇದು ತೇಜಸ್ವಿನಿ ಅವರನ್ನು ಹೆಚ್ಚು ಭ್ರಮನಿರಸನ ಮಾಡಿತ್ತು.

    ಇನ್ನು ಕೊನೇ ಆಯ್ಕೆಯಾಗಿದ್ದ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೇಗೂ ಹಾಲಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಬದಲಾವಣೆ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಹಾಗಾಗಿ ಅಲ್ಲಿಯಾದರೂ ತಮಗೆ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿ ತೇಜಸ್ವಿನಿ ಗೌಡ ಇದ್ದರು. ಇಲ್ಲಿಯೂ ಸಹ ಮಹಾರಾಜ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದ್ದು ಅವರು ಅಸಮಾಧಾನ ಹೆಚ್ಚಲು ಕಾರಣವಾಗಿತ್ತು. ಹೀಗಾಗಿ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts